

ಸಂಡೂರು: ಅಂಬೇಡ್ಕರ್ ಅವರು ಬರೆದ ಸಂವಿಧಾನ ಎಲ್ಲ ವರ್ಗದವರಿಗೆ ಮೀಸಲಾತಿ ಒದಗಿಸಿದೆ ಎಂದು ಸಂಸದ ಈ.ತುಕಾರಾಮ್ ಹೇಳಿದರು.
ಇದನ್ನೂ ಓದಿ: ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದ ನಾಯಕ
ಪಟ್ಟಣದ ತಾಲೂಕು ಕಚೇರಿಯಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಅಂಬೇಡ್ಕರ್ ಹೇಳಿದಂತೆ ಇತಿಹಾಸ ಮರೆತವರು ಎಂದೂ ಇತಿಹಾಸ ಸೃಷ್ಟಿಸಲಾರರು ಎಂದರು.
ಶಾಸಕಿ ಅನ್ನಪೂರ್ಣ ತುಕಾರಾಮ್ ಮಾತನಾಡಿ, ಶಿಕ್ಷಣ, ಸಂಘಟನೆ, ಹೋರಾಟ ಎಂಬ ಅರ್ಥದಲ್ಲಿ ಹೋರಾಡಿದ ಮಹಾನ್ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಯಾವ ಹಳ್ಳಿಯಲ್ಲಿ ಗುಡಿಗಳ ಗಂಟೆಗಿಂತ ಶಾಲೆ ಗಂಟೆ ಹೆಚ್ಚು ಸದ್ದು ಮಾಡುತ್ತದೆಯೋ ಆ ಹಳ್ಳಿ ಉದ್ಧಾರವಾಗುತ್ತದೆ ಎಂದು ಅಂಬೇಡ್ಕರ್ ಹೇಳಿದ್ದರು.
ನಾಲ್ಕು ಗೋಡೆಗಳ ಮಧ್ಯೆ ಬೆಳೆದ ನಾನು ವಿಧಾನಸೌಧದ ಮೆಟ್ಟಿಲು ಹತ್ತಿದ್ದೇನೆಂದರೆ ಅದಕ್ಕೆ ಅಂಬೇಡ್ಕರ್ ಅವರು ಕಲ್ಪಿಸಿದ ಮೀಸಲಾತಿ ಕಾರಣ. ಜಯಂತಿ ಆಚರಣೆ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯ ನಿರಂತರವಾಗಿರಲಿ ಎಂದರು.
ಉಪನ್ಯಾಸಕ ಡಾ.ಎಸ್.ಬಿ.ಚಂದ್ರಶೇಖರ್, ವಿರಕ್ತಮಠದ ಶ್ರೀ ಪ್ರಭುಸ್ವಾಮೀಜಿ, ತಹಸೀಲ್ದಾರ್ ಅನಿಲ್ ಕುಮಾರ್, ತಾಪಂ ಇಒ ಮಡಗಿನ ಬಸಪ್ಪ, ಸಿಪಿಐ ಮಹೇಶ್ ಗೌಡ, ಪುರಸಭೆ ಅಧ್ಯಕ್ಷ ಎಸ್.ಸಿರಾಜ್ ಹುಸೇನ್, ಉಪಾಧ್ಯಕ್ಷೆ ಎಂ.ಸಿ.ಲತಾ ಉಜ್ಜಪ್ಪ, ಮುಖ್ಯಾಧಿಕಾರಿ ಕೆ.ಜಯಣ್ಣ,
ಸಮಾಜ ಕಲ್ಯಾಣ ಇಲಾಖೆ ಎಡಿ ಎನ್.ಕೆ.ವೆಂಕಟೇಶ, ವೀರಶೈವ ಮುಖಂಡ ಬಿ.ಜಿ.ಸಿದ್ದನಗೌಡ, ವಾಲ್ಮೀಕಿ ಮಹಾಸಭಾದ ಮಾಜಿ ಅಧ್ಯಕ್ಷ ಡಿ.ಕೃಷ್ಣಪ್ಪ, ಅಧ್ಯಕ್ಷ ವದ್ದಟ್ಟಿ ಅಂಬರೀಷ್, ಪ್ರಮುಖರಾದ ನಿಂಗಪ್ಪ ಐಹೊಳೆ, ಎಂ.ಶಿವಲಿಂಗಪ್ಪ, ದಲಿತ ಸಂಘರ್ಷ ಸಮಿತಿ ಸಂಚಾಲಕ ರಾಮಕೃಷ್ಣ ಹೆಗಡೆ, ಎಲ್.ಎಚ್.ಶಿವಕುಮಾರ್, ಕೆ.ವಿ.ಸುರೇಶ್ ಇತರರಿದ್ದರು.