ಜನಸೇವೆ ಅವಕಾಶವನ್ನು ಸಮರ್ಪಕವಾಗಿ ನಿರ್ವಹಿಸುವೆ; ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಭರವಸೆ

mtb
Published on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ನನಗೆ ಜನಸೇವೆ ಮಾಡುವ ಅವಕಾಶ ನೀಡಿ ಜವಾಬ್ದಾರಿ ನೀಡಿದ್ದಾರೆ. ಇದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದರು.

ಗರುಡಾಚಾರ್‌ಪಾಳ್ಯದ ಸ್ವಗೃಹದಲ್ಲಿ ಬುಧವಾರ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ತಾಲೂಕಿನ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ಮತ್ತಷ್ಟು ಕೆಲಸ ಮಾಡುವ ಯೋಜನೆಗಳಿತ್ತು. ಕಳೆದ ಉಪಚುನಾವಣೆಯಲ್ಲಿ ಕೆಲವರ ಷಡ್ಯಂತ್ರದಿಂದ ಅವಕಾಶ ತಪ್ಪಿತ್ತು. ಆದರೂ ಎದೆಗುಂದಿಲ್ಲ. ಈಗಲೂ ಜನಪರ ಕೆಲಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಕರೊನಾ ತೀವ್ರತೆ ಪಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಸಾರ್ವಜನಿಕರೇ ಸ್ವಯಂಪ್ರೇರಿತವಾಗಿ ಎಚ್ಚೆತ್ತುಕೊಳ್ಳಬೇಕು. ರಾಜ್ಯ ಸರ್ಕಾರ ಕರೊನಾ ನಿಯಂತ್ರಣದಲ್ಲಿ ಸಾಕಷ್ಟು ಶ್ರಮಿಸುತ್ತಿದೆ. ಸರ್ಕಾರದೊಂದಿಗೆ ಕೈಜೋಡಿಸುವ ಮೂಲಕ ಮಹಾಮಾರಿ ಕರೊನಾ ತಡೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪಟಾಕಿ ಸಿಡಿಸಿ ಸಂಭ್ರಮ: ವಿಧಾನ ಪರಿಷತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಹೊಸಕೋಟೆಯಲ್ಲಿ ಕಾರ್ಯಕರ್ತರು ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net