ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷಕ್ಕೆ ಬಿಟ್ಟಿದ್ದು

D.K.Shivakumar 01
Published on

ಹುಬ್ಬಳ್ಳಿ : ಜೈನ ಆಚಾರ್ಯ ಶ್ರೀ ಗುಣಧರನಂದಿ ಮಹಾರಾಜರು ಮುಖ್ಯಮಂತ್ರಿ ಆಗುವಂತೆ ನನಗೆ ಆಶೀರ್ವಾದ ಮಾಡಿದ್ದಾರೆ. ಅದು ಅವರ ಇಚ್ಛೆ. ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಗುರುಗಳು ಆಶೀರ್ವಾದ ಮಾಡುವಾಗ ನಾವು ಏನು ಹೇಳಲು ಸಾಧ್ಯ? ಎಂದು ಪ್ರಶ್ನಿಸಿದರು.

ಏನೇ ಇದ್ದರೂ ಪಕ್ಷದ ತೀರ್ಮಾನ ಮುಖ್ಯ. ಪಕ್ಷ ಸೂಚಿಸುವ ಕೆಲಸವನ್ನು ನಾನು ಮಾಡುತ್ತೇನೆ. ನಾನು ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ. ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಏನು ಕೆಲಸ ಮಾಡಬೇಕೋ ಅದನ್ನು ನಾನು ಮಾಡುತ್ತೇನೆ. ನಾನು ಆತುರದಲ್ಲಿ ಇಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net