ಇನ್ಮುಂದೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ

geeta shivaraj kumar
Published on

ಶಿವಮೊಗ್ಗ: ಇನ್ನು ಮುಂದೆ ಯಾವ ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ಗೀತಾ ಶಿವರಾಜ್‌ಕುಮಾರ್ ಘೋಷಿಸಿದ್ದಾರೆ.

ನಗರದ ಬಂಜಾರ ಭವನದಲ್ಲಿ ಶನಿವಾರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಇನ್ನು ಚುನಾವಣೆಗೆ ಸ್ಪರ್ಧೆ ಮಾಡದಿದ್ದರೂ ಪಕ್ಷ ಸಂಘಟನೆಯಲ್ಲಿ ಸದಾ ಜತೆಗಿರುತ್ತೇನೆ. ನಿಮ್ಮೊಂದಿಗೆ ಕೆಲಸ ಮಾಡುತ್ತೇನೆ. ಯಾವಾಗ ಕರೆದರೂ ಬರುತ್ತೇನೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಶ್ವೇತಾ ಬಂಡಿ ಅವರನ್ನು ಅಭಿನಂದಿಸಿದ ಅವರು, ನಾನು ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ನಿಂತಾಗ ಅವರೆಲ್ಲ ಪ್ರಚಾರದಲ್ಲಿ ಶ್ರಮಿಸಿದ್ದಾರೆ. ಇಂದಿನ ಸಮಾವೇಶ ನನಗೆ ವೈಯಕ್ತಿಕವಾಗಿಯೂ ಖುಷಿ ತಂದಿದೆ. ಮಹಿಳೆಯರು ಅಬಲೆಯರಲ್ಲ, ಸಬಲೆಯರು ಎಂಬುದಕ್ಕೆ ಇಂದಿನ ವೇದಿಕೆ ಸಾಕ್ಷಿಯಾಗಿದೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಪಕ್ಷ ಸಂಘಟಿಸುವ ಶಕ್ತಿ ಶ್ವೇತಾ ಬಂಡಿ ಅವರಿಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net