ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ

BJP PRESSMEET
ಚಿಕ್ಕಮಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿದರು. ದೇವರಾಜ ಶೆಟ್ಟಿ, ಕಲ್ಮರುಪ್ಪ, ಜೀವರಾಜ್ ಮತ್ತಿತರರು ಇದ್ದರು.
Published on

ಚಿಕ್ಕಮಗಳೂರು: ದೇಶದಾದ್ಯಂತ ಹಾಗೂ ಉಡುಪಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತವು ಮೋದಿ ಅವರ ಪ್ರಭಾವ ವಿರುವುದರಿಂದ ಜೊತೆಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಬಲದಿಂದಾಗಿ ನಾನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ನಗರದ ಪ್ರಸ್ ಕ್ಲಬ್ ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಇವೆಲ್ಲವೂ ನಮ್ಮ ಗೆಲುವಿಗೆ ನೆರವಾಗಲಿವೆ ಎಂದು ತಿಳಿಸಿದರು.
ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸಂಸದ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದಾದ್ಯಂತ ಉತ್ತಮವಾಗಿ ಕೆಲಸ ಮಾಡಿದ್ದಾರೆ ಶೀಘ್ರವೇ ಅವರು ತಮ್ಮ ಅವಧಿಯಲ್ಲದ ಕಾಮಗಾರಿಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಇದು ಸಹ ನಮಗೆ ನೇರವಾಗಲಿದೆ. ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಜೆಪಿ ಪಕ್ಷ ಸದೃಢವಾಗಿದೆ ತಳಮಟ್ಟದಿಂದಲೂ ಕಾರ್ಯಕರ್ತರ ಪಡೆಯನ್ನು ಹೊಂದಿದ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದರು.
ಅಭ್ಯರ್ಥಿ ಘೋಷಣೆಯಾಗುವವರೆಗೂ ಗೊಂದಲ ಇರುವುದು ಸಾಮಾನ್ಯ. ಅದೇ ರೀತಿಯ ಈ ಬಾರಿಯೂ ಗೊಂದಲವಾಗಿತ್ತು. ಮಳೆ ಬರುವ ಮುನ್ನ ಗುಡುಗು ಸಿಡಿಲು ಇರುತ್ತದೆ ಮಳೆ ಬಂದ ಬಳಿಕ ಎಲ್ಲವೂ ತಣ್ಣಗಾಗುತ್ತದೆ ಅದೇ ರೀತಿಯ ಪಕ್ಷದ ಅಭ್ಯರ್ಥಿ ಘೋಷಣೆಯಾದ ಬಳಿಕ ಎಲ್ಲಾ ಗೊಂದಲವು ತಣ್ಣಗಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಡಿ.ಎನ್. ಜೀವರಾಜ್, ವಿಧಾನಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ ಶೆಟ್ಟಿ, ಮುಖಂಡರಾದ ಎಚ್.ಸಿ. ಕಲ್ಮುರುಡಪ್ಪ, ಹಿರೇಮಗಳೂರು ಪುಟ್ಟಸ್ವಾಮಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net