

ಹಾವೇರಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಮಹಮ್ಮದ ರೋಷನ್ ಅವರನ್ನು ಹುಬ್ಬಳ್ಳಿಯ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾಯಿಸಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
2015ರ ಬ್ಯಾಚ್‌ನ ಐಎಎಸ್ ಅಧಿಕಾರಿ ರೋಷನ್ ಕಳೆದ ಎರಡು ವರ್ಷಗಳಿಂದ ಹಾವೇರಿ ಜಿಪಂ ಸಿಇಒ ಆಗಿದ್ದರು. ಇವರ ಸ್ಥಾನಕ್ಕೆ ಸರ್ಕಾರ ಇನ್ನೂ ಯಾರನ್ನೂ ನೇಮಿಸಿಲ್ಲ.