ಇಬ್ರಾಹಿಂಪುರ ರೈಲ್ವೆ ಮೇಲ್ಸೇತುವೆ ಕಾಮಗಾರಿ ನವೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಿ

VJP-2-5
ವಿಜಯಪುರದ ಇಬ್ರಾಹಿಂಪುರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನರ ಭೇಟಿ ನೀಡಿ ಪರಿಶೀಲಿಸಿದರು. ಎಸ್‌ಪಿ ಎಚ್.ಡಿ.ಆನಂದಕುಮಾರ, ವಿಜಯಕುಮಾರ ಮೆಕ್ಕಳಕಿ ಮತ್ತಿತರರಿದ್ದರು.
Published on

ವಿಜಯಪುರ: ನಗರದಲ್ಲಿ ನಡೆಯುತ್ತಿರುವ ಇಬ್ರಾಹಿಂಪುರ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ನವೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಅಂದಾಜು ಪಟ್ಟಿ ಪ್ರಕಾರ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಯಾವುದೇ ನೆಪ ಹೇಳುವಂತಿಲ್ಲ. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತ್ವರಿತವಾಗಿ ಕಾಮಗಾರಿ ಕೈಗೊಳ್ಳಬೇಕೆಂದು ಎಚ್ಚರಿಸಿದರು.

ಎಸ್‌ಪಿ ಎಚ್.ಡಿ.ಆನಂದಕುಮಾರ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ರೈಲ್ವೆ ಉಪಮುಖ್ಯ ಅಭಿಯಂತರ ಸಿ.ಪಿ.ರೆಡ್ಡಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೋಮನಾಥ, ಗುತ್ತಿಗೆದಾರ ವೆಂಕಟರೆಡ್ಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net