ಯಕ್ಷರಂಗದ ಅಪ್ರತಿಮ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ನಿಧನ

Kumble Sundar Rao
Published on

ಮಂಗಳೂರು: ಯಕ್ಷರಂಗದ ಅಪ್ರತಿಮ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್(90) ಅವರು ಬುಧವಾರ ನಿಧನರಾದರು.

ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರಾಗಿದ್ದ ಸುಂದರ್ ರಾವ್, ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಆಯ್ಕೆಯಾಗಿದ್ದರು. 1994ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದರು. ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆ ಅರವದ್ದು, ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ರ ಮಾರ್ಚ್ 20ರಂದು ಕೇರಳ ರಾಜ್ಯದ ಕುಂಬ್ಳೆಯಲ್ಲಿ ಜನಿಸಿದರು. ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರು ಇದ್ದಾರೆ.

ಕುಂಬ್ಳೆ ಸುಂದರ್ ರಾವ್​ರ ಅಂತ್ಯಕ್ರಿಯೆ ಗುರುವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಂಗಳೂರು ಪಂಪ್ವೆಲ್​ ಬಳಿ ಇರುವ ಅವರ ಮನೆಯಲ್ಲಿ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net