ಸಕ್ರಿಯ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ

IMG20241019131038.jpg
Published on

ಬೆಳಗಾವಿ: ಬಿಜೆಪಿಯಲ್ಲಿ ಅತ್ಯಂತ ಕ್ರಿಯಾಶೀಲ ಸದಸ್ಯರನ್ನು ಗುರುತಿಸಿ ಮುಂಬರುವ ದಿನಗಳಲ್ಲಿ ಸೂಕ್ತ ಸ್ಥಾನಮಾನ ಒದಗಿಸುವ ಕಾರ್ಯ ನಡೆದಿದ್ದು, ಕಾರ್ಯಕರ್ತರು ತಮ್ಮ ಕಾರ್ಯಕ್ಷಮತೆಯಿಂದ ಸಕ್ರಿಯ ಸದಸ್ಯತ್ವ ಪಡೆದುಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ಎಫ್.ಎಸ್. ಸಿದ್ದನಗೌಡರ ಹೇಳಿದರು.

ನಗರದ ಧರ್ಮನಾಥ ವೃತ್ತದಲ್ಲಿರುವ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಕ್ರಿಯ ಸದಸ್ಯತ್ವ ಅಭಿಯಾನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ರಾಷ್ಟ್ರದಲ್ಲಿ 9 ಕೋಟಿಗಿಂತ ಅಧಿಕ ಜನತೆ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ. ಇದು ಅ.31 ರವರೆಗೆ ಚಾಲ್ತಿಯಲ್ಲಿದೆ. ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಸದಸ್ಯತ್ವವಾಗಿದ್ದು ಬೆಳಗಾವಿ ಗ್ರಾಮಾಂತರ ಜಿಲ್ಲೆಯಲ್ಲಿ 8 ವಿಧಾನಸಭಾ ಕ್ಷೇತ್ರಗಳಲ್ಲಿ 1.60 ಲಕ್ಷಕ್ಕೂ ಅಧಿಕ ಬಿಜೆಪಿ ಸದಸ್ಯತ್ವ ನಡೆಯುತ್ತಿದೆ. ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಸಾಮಾಜಿಕ ಜಾಲತಾಣದ ಸದಸ್ಯ ನಿತೀನ್ ಚೌಗಲೆ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ವಿನಯ ಕದಂ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಶ್ರೀಕರ ಕುಲಕರ್ಣಿ, ಮಹಾದೇವ ಶಕ್ಕಿ, ಸುಭಾಷ ಪಾಟೀಲ, ಮಂಡಲ ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರ್ಗಿ, ಈರಣ್ಣ ಹೊಸಗೌಡ್ರ, ವಿಶಾಲ ಬೋಗೂರ, ಗುಂಡು ತೊಪಿನಕಟ್ಟಿ, ಬಸವರಾಜ ದೊಡಮನಿ, ವಿನಯ ತುರಮರಿ, ಬಸವರಾಜ ಹುಬ್ಬಳ್ಳಿ, ಮಹಾದೇವ ಮುರಗೋಡ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ವಿಠ್ಠಲ ಸಾಯಣ್ಣವರ, ಗಜಾನನ ಮಹಿಂದ್ರಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net