ಯರಗುಪ್ಪಿಗೆ ಆದರ್ಶ ಶಿಕ್ಷಕರತ್ನ ಪ್ರಶಸ್ತಿ

8 lxr 5( b m yaraguppi)
Published on

ಲಕ್ಷ್ಮೇಶ್ವರ: ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು (ರಿ) ರಾಜ್ಯ ಘಟಕ ಬೆಂಗಳೂರು, ಲಯನ್ಸ್ ಕ್ಲಬ್ ಆಫ್ ಕೆಜಿಎಫ್ ಗೋಲ್ಡ್ ಮೈನ್ಸ್ ಹಾಗೂ ಸ್ವರ್ಣ ಭೂಮಿ ಫೌಂಡೇಷನ್ ಕೊಡಮಾಡುವ ರಾಜ್ಯ ಮಟ್ಟದ ಡಾ ಸರ್ವೆಪಲ್ಲಿ ರಾಧಾಕೃಷ್ಣನ್ ಆದರ್ಶ ಶಿಕ್ಷಕರತ್ನ ಪ್ರಶಸ್ತಿಗೆ ಶಿರಹಟ್ಟಿ ತಾಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಸವರಾಜ ಎಂ. ಯರಗುಪ್ಪಿ ಭಾಜನರಾಗಿದ್ದಾರೆ. 16 ವರ್ಷಗಳ ಶಿಕ್ಷಣ ಸೇವೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಇವರು 2018-19 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದಾರೆ. ಸದ್ಯ ಬಿಆರ್​ಸಿ ಕೇಂದ್ರದ ಸಂಪನ್ಮೂಲ ವ್ಯಕ್ತಿಯಾಗಿ, ಮಕ್ಕಳ ಮತ್ತು ಸಮುದಾಯದ ಒಡನಾಡಿಗಳಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಜ್ಞಾನ ದಾಸೋಹ ನೀಡುತ್ತಿರುವ ಇವರ ಎಲ್ಲಾ ಸೇವಾ ಕಾರ್ಯಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಸೆ. 10 ರಂದು ಕೋಲಾರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net