ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

bbgd 9-1
ಬಸವನಬಾಗೇವಾಡಿಯ ಬಸವ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವದಲ್ಲಿ ವಿರಕ್ತಮಠದ ಸಿದ್ಧಲಿಂಗ ಶ್ರೀಗಳು ಮಾತನಾಡಿದರು. ಇಂದುಮತಿ ಸಾಲಿಮಠ, ಎಸ್.ಎಸ್. ಝಳಕಿ ಇತರರಿದ್ದರು.
Published on

ಬಸವನಬಾಗೇವಾಡಿ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದು ಅಗತ್ಯವಾಗಿದೆ ಎಂದು ವಿರಕ್ತಮಠದ ಸಿದ್ಧಲಿಂಗ ಶ್ರೀಗಳು ಹೇಳಿದರು.

ಪಟ್ಟಣದ ವಿಶ್ವಗುರು ಶಿಕ್ಷಣ ಸಂಸ್ಥೆಯ ಬಸವ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಬಾಲ್ಯದಲ್ಲೇ ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಶಿಕ್ಷಣ ನೀಡಿದರೆ ಅವರು ಪ್ರಬುದ್ಧ ನಾಗರಿಕರಾಗುತ್ತಾರೆ. ವಿದ್ಯಾಕಾಶಿ ಧಾರವಾಡದಲ್ಲಿ ಸಿಗುವಂತಹ ಗುಣಮಟ್ಟದ ಶಿಕ್ಷಣ ಈ ಭಾಗದ ಮಕ್ಕಳಿಗೂ ಸಿಗುವಂತಾಗಬೇಕು ಎಂದರು.

ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಕಾರ್ಯಕ್ರಮ ಉದ್ಘಾಟಿಸಿ, ಜೀವನಕ್ಕಾಗಿ ಇಂಗ್ಲಿಷ್ ಭಾಷೆ ಕಲಿಯಬೇಕು. ನಿತ್ಯ ಜೀವನದಲ್ಲಿ ಕನ್ನಡ ಭಾಷೆ ಬಳಕೆಯಾಗಬೇಕು ಎಂದರು.

ಸಂಸ್ಥೆ ಅಧ್ಯಕ್ಷ ಕೆ.ವೈ. ಬೀರಲದಿನ್ನಿ ಮಾತನಾಡಿ, ನಮ್ಮ ಸಂಸ್ಥೆಯಿಂದ ಈ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದರು.

ನಿವೃತ್ತ್ತ ಉಪಪ್ರಾಚಾರ್ಯಎಸ್.ಎಸ್. ಝಳಕಿ, ನಿವೃತ್ತ್ತ ಶಿಕ್ಷಕ ಎ್.ಡಿ. ಮೇಟಿ, ನಿವೃತ್ತ್ತ ಶಿಕ್ಷಕ ಎಸ್.ಬಿ. ಬಶೆಟ್ಟಿ, ನಿವೃತ್ತ ಉಪನ್ಯಾಸಕ ಎಚ್.ಎಸ್. ಬಿರಾದಾರ, ನಿವೃತ್ತ ಮುಖ್ಯಶಿಕ್ಷಕ ಎಸ್.ಎಂ. ಸಿಂದಗಿ, ಶಿಕ್ಷಣ ಇಲಾಖೆಯ ಎ.ಎಸ್. ಗುಬ್ಬಾ, ಎಂ.ವಿ. ಗಬ್ಬೂರ, ಬಿ.ಎಸ್. ಚನ್ನಗೊಂಡ, ಸಂಗಯ್ಯ ಹಿರೇಮಠ, ರಾಘವೇಂದ್ರ ಚಿಕ್ಕೊಂಡ, ಪ್ರಕಾಶ ಮಸಬಿನಾಳ ಉಪಸ್ಥಿತರಿದ್ದರು. ಅಜಯ ಮಠ, ವರದಿ ವಾಚಿಸಿದರು. ಜ್ಯೋತಿ ಕೊಟ್ಲಿ, ಮುಜಾವರ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net