ಒಂದು ಹಾಡಿ ಯೋಜನೆಗೆ ಭೂಮಿ ಗುರುತಿಸಿ

 ಹುಣಸೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ.ಅಮರನಾಥ್ ಅವರಿಗೆ ಡೀಡ್ ಸಂಸ್ಥೆ ವತಿಯಿಂದ ಮನವಿ ಸಲ್ಲಿಸಲಾಯಿತು. ಎ.ಪ್ರಕಾಶ್ ಇದ್ದರು.
ಹುಣಸೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ.ಅಮರನಾಥ್ ಅವರಿಗೆ ಡೀಡ್ ಸಂಸ್ಥೆ ವತಿಯಿಂದ ಮನವಿ ಸಲ್ಲಿಸಲಾಯಿತು. ಎ.ಪ್ರಕಾಶ್ ಇದ್ದರು.
Published on

ಹುಣಸೂರು: ನಗರದಲ್ಲಿ ಒಂದು ಹಾಡಿ ಯೋಜನೆ ಜಾರಿಗಾಗಿ 10 ಎಕರೆ ಭೂಮಿಯನ್ನು ಗುರುತಿಸಬೇಕೆಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ.ಅಮರನಾಥ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಡೀಡ್ ಸಂಸ್ಥೆ ನಿರ್ದೇಶಕ ಡಾ.ಎಸ್.ಶ್ರೀಾಂತ್ ತಿಳಿಸಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಗೆ ಶನಿವಾರ ಮನವಿ ಸಲ್ಲಿಸಿ ಮಾತನಾಡಿದ ಅವರು, ಎಚ್.ಡಿ.ಕೋಟೆ ರಸ್ತೆ ಅಥವಾ ಮಡಿಕೇರಿ ರಸ್ತೆಗೆ ಹೊಂದಿಕೊಂಡಂತೆ 10 ಎಕರೆ ಜಾಗವನ್ನು ನಿಗದಿಪಡಿಸಿ ಹುಡಾ ಯೋಜನೆ ವ್ಯಾಪ್ತಿಯಲ್ಲಿ ಗುರುತಿಸಬೇಕೆಂದು ಮನವಿ ಮಾಡಲಾಗಿದೆ. ಯೋಜನೆ ಜಾರಿ ಸಂಬಂಧ ರಾಜ್ಯದ ಮುಖ್ಯಮಂತ್ರಿ, ಪರಿಶಿಷ್ಟ ಪಂಗಡದ ಪ್ರಧಾನ ಕಾರ್ಯದರ್ಶಿ ರಂದೀಪ್ ಅವರಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ವಿನಂತಿಸಲಾಗಿದೆ.

ಶಾಸಕ ಜಿ.ಡಿ.ಹರೀಶ್‌ಗೌಡರಿಗೂ ಈ ಕುರಿತು ಮನವಿ ಸಲ್ಲಿಸಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದರೊಂದಿಗೆ ಚಿಕ್ಕಹುಣಸೂರು ಕೆರೆಯನ್ನು ಅಭಿವೃದ್ಧಿಪಡಿಸಲು ಮುಂದಾಗಬೇಕೆಂದು ಕೋರಲಾಗಿದೆ ಎಂದು ತಿಳಿಸಿದರು. ಡೀಡ್ ಸಂಸ್ಥೆಯ ಎ.ಪ್ರಕಾಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net