ಟೌನ್‌ಶಿಪ್, ವಿಲ್ಲಾ ಯೋಜನೆಗೆ ಜಮೀನು ಗುರುತಿಸಲು ವಸತಿ ಸಚಿವ ಸೂಚನೆ

jameer 1
Published on

ಬೆಂಗಳೂರು: ಕರ್ನಾಟಕ ಗೃಹ ಮಂಡಳಿಯಿಂದ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿರುವ ಟೌನ್‌ಶಿಪ್ ಹಾಗೂ ವಿಲ್ಲಾ ಯೋಜನೆಗೆ ಅಗತ್ಯ ಜಮೀನು ಗುರುತಿಸುವ ಕಾರ್ಯ ತಕ್ಷಣ ಆರಂಭಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಗೃಹಮಂಡಳಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಧಾನಿಯ ಐದು ಕಡೆ ತಲಾ ಎರಡು ಸಾವಿರ ಎಕರೆಯಲ್ಲಿ ಟೌನ್ ಶಿಪ್ ಹಾಗೂ ತಲಾ 500 ಎಕರೆಯಲ್ಲಿ ನಾಲ್ಕು ಕಡೆ ವಿಲ್ಲಾ ಯೋಜನೆಗೆ ಜಮೀನು ಗುರುತಿಸಿ ಪ್ರಕ್ರಿಯೆ ಆರಂಭಿಸಿ. ಅದಕ್ಕಾಗಿ ಅಧಿಕಾರಿಗಳ ವಿಶೇಷ ತಂಡ ರಚಿಸಲು ನಿರ್ದೇಶನ ನೀಡಿದರು.

ಟೌನ್ ಶಿಪ್ ಹಾಗೂ ವಿಲ್ಲಾ ಯೋಜನೆ ಕಾಲ ಮಿತಿಯಲ್ಲಿ ಪೂರ್ಣಗೊಳ್ಳ ಬೇಕಾಗಿದೆ. ಹೀಗಾಗಿ ರೂಪು ರೇಷೆ ಹಾಕಿಕೊಂಡು ಪ್ರತ್ಯೇಕ ವಿಭಾಗ ರಚನೆ ಮಾಡಿ ಕಾರ್ಯ ಪ್ರವೃತ್ತರಾಗಿ ಎಂದು ಸೂಚನೆ ನೀಡಿದರು.

ರಾಜಧಾನಿಯ ನಾಲ್ಕು ಕಡೆ ಮೆಟ್ರೋ ಸೇರಿ ಸಾರಿಗೆ ಹಾಗೂ ಇತರೆ ಮೂಲ ಸೌಕರ್ಯ ವ್ಯವಸ್ಥೆ ಲಭ್ಯ ಇರುವ ಕಡೆ ಜಮೀನು ಗುರುತಿಸಿ 50:50 ಆಧಾರದಲ್ಲಿ ಜಮೀನು ಮಾಲೀಕರ ಜತೆ ಒಪ್ಪಂದ ಮಾಡಿಕೊಂಡು ಬಡಾವಣೆ ನಿರ್ಮಾಣ ಕಾರ್ಯಕ್ಕೆ ವೇಗ ನೀಡಬೇಕು ಎಂದು ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net