

ಬೆಂಗಳೂರು: ( Plastic Use In Hotels And Restaurants In Karnataka Banned ) ರಾಜ್ಯದಾದ್ಯಂತ ಇನ್ಮುಂದೆ ಹೋಟೆಲ್, ರೆಸ್ಟೋರೆಂಟ್, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51 ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟಿದೆ. ಇದರಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಪ್ಲಾಸ್ಟಿಕ್ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರಿದೆ. ಈ ಬೆನ್ನಲ್ಲೇ ಕರ್ನಾಟಕ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ.
ಹೋಟೆಲ್ಗಳಲ್ಲಿ ಇಡ್ಲಿ ತಯಾರಿಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ ಈಗ ಹೆಚ್ಚಿನ ಕಡೆ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಇದರಿಂದ ಅನಾರೋಗ್ಯಕ್ಕೆ ಕಾರಣವಾದ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ಕಾರ್ಸಿನೋಜೆನಿಕ್ ಅಂಶ ಕ್ಯಾನ್ಸರ್ಗೆ ಕಾರಣವಾಗುತ್ತದೆ .
ಬೆಂಗಳೂರಿನ ಅನೇಕ ಹೋಟೆಲ್ಗಳಲ್ಲಿ ತಯಾರಾಗುವ ಇಡ್ಲಿ ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಲ್ಲಿ ದೃಢಪಟ್ಟ ತಕ್ಷಣವೇ ಆರೋಗ್ಯ ಸಚಿವರು ಆ ಬಗ್ಗೆ ಕ್ರಮಕ್ಕೆ ಮುಂದಾಗಿದ್ದಾರೆ.