ಸೆ.11ರಂದು ನಗರದಲ್ಲಿ ಮ್ಯಾರಥಾನ್: ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಎಂ.ಎನ್.ಆಶಾಲತಾ ಹೇಳಿಕೆ

IEC campaign meeting Mandya
Published on

ಮಂಡ್ಯ: ಮಾರಕ ರೋಗ ಎಚ್‌ಐವಿ ಹರಡದಂತೆ ತಡೆಗಟ್ಟಲು ಯುವಜನರಲ್ಲಿ ಜಾಗೃತಿ ಮೂಡಿಸಲು ಸೆ.11ರಂದು ಯುವಜನೋತ್ಸವ ಅಂಗವಾಗಿ ಮ್ಯಾರಥಾನ್ ಓಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್.ಆಶಾಲತಾ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಐ.ಇ.ಸಿ ಪ್ರಚಾಂದೋಲನಾ ಸಭೆಯಲ್ಲಿ ಮಾತನಾಡಿದ ಅವರು, ಮ್ಯಾರಥಾನ್ ಸ್ಪರ್ಧೆಗೆ 17 ರಿಂದ 25 ವರ್ಷದ 250 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನಗರದ ಸರ್.ಎಂ.ವಿ ಜಿಲ್ಲಾ ಕ್ರೀಡಾಂಗಣದಿಂದ ಪ್ರಾರಂಭವಾಗಿ ಮುಖ್ಯರಸ್ತೆಗಳಲ್ಲಿ ಒಟ್ಟು 5 ಕಿ.ಮೀ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್, ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಚೆಲುವಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net