

ಮುಂಡರಗಿ: ಉತ್ತಮ ಮತ್ತು ಸದೃಢ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಎಲ್ಲರಿಗಿಂತಲೂ ಶಿಕ್ಷಕರ ಪಾತ್ರ ದೊಡ್ಡದು. ಈ ಕಾರಣದಿಂದ ಶಿಕ್ಷಕರು ಮುತುವರ್ಜಿ ಹಾಗೂ ಜವಾಬ್ದಾರಿಯಿಂದ ತಮ್ಮ ಕೆಲಸ ನಿರ್ವಹಿಸಬೇಕು ಎಂದು ಮಾಜಿ ಸಚಿವ ಎಸ್.ಎಸ್. ಪಾಟೀಲ ಹೇಳಿದರು.
ಸ್ಥಳೀಯ ಜಗದ್ಗುರು ತೋಂಟದಾರ್ಯ ಸಿಬಿಎಸ್ಇ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ 135ನೇ ಜನ್ಮ ದಿನ ಹಾಗೂ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಒಬ್ಬ ಇಂಜಿನಿಯರ್ ತಪ್ಪು ಮಾಡಿದರೆ ಒಂದು ಕಟ್ಟಡ ಹಾನಿಯಾಗುತ್ತದೆ. ಒಬ್ಬ ವೈದ್ಯ ತಪ್ಪು ಮಾಡಿದರೆ ಒಬ್ಬ ರೋಗಿಗೆ ಮಾತ್ರ ಹಾನಿಯಾಗುತ್ತದೆ. ಆದರೆ, ಒಬ್ಬ ಶಿಕ್ಷಕ ತಪ್ಪು ಮಾಡಿದರೆ ಇಡೀ ಮನುಕುಲಕ್ಕೆ ಹಾನಿಯಾಗುತ್ತದೆ. ಹೀಗಾಗಿ ಶಿಕ್ಷಕರು ಸಮಾಜದ ಚಿಕಿತ್ಸಕರಂತೆ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಶಾಲೆಯ ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯ ಕೊಟ್ರೇಶಪ್ಪ ಅಂಗಡಿ, ಪ್ರಾಚಾರ್ಯ ಶರಣಕುಮಾರ ಬುಗುಟಿ ಮಾತನಾಡಿದರು. ನಾರಾಯಣ ಇಲ್ಲೂರ, ಈಶ್ವರಪ್ಪ ಬೆಟಗೇರಿ, ಇತರರಿದ್ದರು.
ವಿದ್ಯಾರ್ಥಿನಿ ಸ್ವಪ್ನಾ ಸುರಕೋಡ ಹಾಗೂ ಮನು ಅಳವಂಡಿ ಕಾರ್ಯಕ್ರಮ ನಿರ್ವಹಿಸಿದರು.