ಆಧಾರ ಲಿಂಕ್ ಆಗದೇ ಇದ್ದರೆ ಅಕ್ಕಿ ದುಡ್ಡು ಬರಲ್ಲ

If Aadhaar is not linked, the extra rice amount will not come
Published on

ಕಾರವಾರ:ಬ್ಯಾಂಕ್‌ ಖಾತೆಗೆ ಆಧಾರ ಸಂಖ್ಯೆ ಲಿಂಕ್ ಆಗದೇ ಇದ್ದಲ್ಲಿ ಅನ್ನಭಾಗ್ಯದ ಅಕ್ಕಿಯ ಹೆಚ್ಚುವರಿ ಹಣ ಜಮಾ ಆಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತಿಳಿಸಿದೆ.
ಪತ್ರಿಕಾ ಹೇಳಿಕೆ ನೀಡಿರುವ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ರೇವಣಕರ್, ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ 5 ಕೆಜಿಯ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂ.ನಂತೆ ಒಬ್ಬ ಸದಸ್ಯನಿಗೆ 170 ರೂ.ಗಳನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ವರ್ಗಾಯಿಸಲು ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ:ಅನ್ನಭಾಗ್ಯ ಯೋಜನೆ; ಅಕ್ಕಿ ಕಡಿತ ಖಂಡಿಸಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದ ಬಿಜೆಪಿ ಶಾಸಕರು
ಡಿಬಿಟಿ ವ್ಯವಸ್ಥೆಯಲ್ಲಿ ಹಣ ಪಾವತಿಸಲು ಮೂಲಕ ಹಣ ಪಾವತಿಸಲು ಪಡಿತರ ಚೀಟಿಯ ಮುಖ್ಯಸ್ಥರು ಕಡ್ಡಾಯವಾಗಿ ಬ್ಯಾಂಕ್ ಖಾತೆಯನ್ನು ಹೊಂದಿದ್ದು ಬ್ಯಾಂಕ್ ಖಾತೆಗೆ ಆಧಾರ ಸಂಖ್ಯೆಯನ್ನು ಲಿಂಕ್ ಮಾಡಬೇಕಾಗಿದೆ.

ಈ ವರೆಗೆ ಖಾತೆ ಹೊಂದದೇ ಇರುವ ಅಥವಾ ಖಾತೆಗೆ ಆಧಾರ ಲಿಂಕ್ ಆಗದೇ ಇರುವ ಫಲಾನುಭವಿಗಳ ಯಾದಿಯನ್ನು ಆಯಾ ತಹಸೀಲ್ದಾರ್‌ಗಳ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ತಲುಪಿಸಲಾಗಿದೆ. ಫಲಾನುಭವಿಗಳು ತಮ್ಮ ನ್ಯಾಯಬೆಲೆ ಅಂಗಡಿಯನ್ನು ಸಂಪರ್ಕಿಸಿ ಪರಿಶೀಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net