ಅನ್ನಭಾಗ್ಯ ಅಕ್ಕಿಮಾರಿದರೆ ಕ್ರಿಮಿನಲ್ ಕೇಸ್ ದಾಖಲು

nrp 1... (3)
Published on

ಎನ್.ಆರ್.ಪುರ: ಪಡಿತರ ಚೀಟಿಯಲ್ಲಿನ ಹೆಸರು ತಿದ್ದುಪಡಿ, ಹೆಸರು ಸೇರ್ಪಡೆಗೆ ಆಗಸ್ಟ್ ಅಂತ್ಯದವರೆಗೆ ಅವಕಾಶವಿದೆ ಎಂದು ಆಹಾರ ಇಲಾಖೆ ಅಧಿಕಾರಿ ಗಣಪತಿ ಮಾಹಿತಿ ನೀಡಿದರು.

ತಾಪಂ ಸಾಮರ್ಥ್ಯ ಸೌಧದಲ್ಲಿ ಚಂದ್ರಮ್ಮ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿ, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಇನ್ನೂ ಅವಕಾಶ ಕಲ್ಪಿಸಿಲ್ಲ. ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸುವಂತೆ ಸರ್ಕಾರದಿಂದ ಆದೇಶವಾಗಿದೆ. ಸರ್ಕಾರದಿಂದ ವಿತರಿಸಿದ ಅಕ್ಕಿಯನ್ನು ಮಾರಾಟ ಮಾಡಿದರೆ ಅಂತಹ ಫಲಾನುಭವಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವ ಅವಕಾಶ ಇದೆ. ಅಂತಹವರ ಕಾರ್ಡುಗಳನ್ನು ರದ್ದುಗೊಳಿಸಲಾಗುವುದು ಎಂದರು.

ತಾಲೂಕಿನಲ್ಲಿ ಒಟ್ಟು 12414 ಬಿಪಿಎಲ್, 2143 ಅಂತ್ಯೋದಯ ಕಾರ್ಡ್‌ದಾರರಿದ್ದು ಎಲ್ಲರಿಗೂ ಅಕ್ಕಿ ವಿತರಿಸಲಾಗಿದೆ. ಹೊಸ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದಲ್ಲಿ ಹೊಸ ಕಾರ್ಡ್ ಮಾಡಿಸುವವರು ಆದಾಯ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ನೀಡಬೇಕು ಎಂದು ಸಭೆಗೆ ತಿಳಿಸಿದರು.

ಸಮಿತಿ ಸದಸ್ಯ ನಿತ್ಯಾನಂದ ಮಾತನಾಡಿ, ಶೃಂಗೇರಿ ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಯಾವಾಗ ಪೂರ್ಣಗೊಳ್ಳಲಿದೆ ಎಂದು ಚಿಕ್ಕಮಗಳೂರು ಡಿಪೋ ಅಧಿಕಾರಿಗಳಿಗೆ ಪ್ರಶ್ನಿಸಿದರು. ಚಿಕ್ಕಮಗಳೂರು ಡಿಪೋ ಸಂಚಾರಿ ನಿಯಂತ್ರಣಾಧಿಕಾರಿ ವಸಂತ್‌ಕುಮಾರ್ ಮಾತನಾಡಿ, ಇನ್ನು ನಾಲ್ಕೈದು ತಿಂಗಳೊಳಗೆ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರ ತಿಳಿಸಿದ್ದಾರೆ ಎಂದರು.

ಸದಸ್ಯರಾದ ಇಂದಿರಾನಗರ ರಘು, ನಾಗರಾಜ್, ಇಸ್ಮಾಯಿಲ್, ಹೂವಮ್ಮ, ದೇವರಾಜ್, ಜಯರಾಂ, ಕೆ.ಕೆ.ಗೌತಮ್, ನಿತ್ಯಾನಂದ, ತಾಪಂ ಸಿಬ್ಬಂದಿ ಶ್ರೀದೇವಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net