ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಬಾರದೆಂದರೆ ಸಂಪೂರ್ಣ ಲಾಕ್​ಡೌನ್​ ಮಾಡಿ: ಎಚ್.ಡಿ. ಕುಮಾರಸ್ವಾಮಿ

BSY And HDk 26 Dec 19
Published on

ಬೆಂಗಳೂರು: ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್​ಡೌನ್, ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.

ಇಂದು ಬೆಳಗ್ಗೆ ಸರಣಿ ಟ್ವೀಟ್​ ಮಾಡಿರುವ ಎಚ್​ಡಿಕೆ, ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಚಿವ ಸುಧಾಕರ್ ತಂದೆಗೆ ಕರೊನಾ ಸೋಂಕು ಬೆನ್ನಲ್ಲೇ ಪತ್ನಿ, ಮಗಳಿಗೂ ಮಹಾಮಾರಿ ಕಂಟಕ

ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎಂದು ಟೀಕಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net