ಬೂತ್ ಸಶಕ್ತವಾದರೆ ಗೆಲುವು ನಮ್ಮದೇ

New Bjp New
Published on

ಹುಬ್ಬಳ್ಳಿ : ಬೂತ್​ಗಳು ಸಶಕ್ತರಾದರೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆಲುವು ನಮ್ಮದೇ ಎಂದು ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು

ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಧಾರವಾಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

ಬೂತ್ ಕಮಿಟಿಗಳು ಸಶಕ್ತವಾಗಿದೆ. ಪ್ರತಿ ಬೂತ್ ಮಟ್ಟದಲ್ಲಿ ನಿರಂತರ ಸಭೆ ನಡೆಸಬೇಕು. ಈಗಾಗಲೇ ಶೇ. 70ರಷ್ಟು ಬೂತ್​ವುಟ್ಟದಲ್ಲಿ ಕೆಲಸಗಳು ಆಗಿವೆ ಎಂದರು.

ಶಿಗ್ಗಾಂವಿ, ಸವಣೂರು ಕ್ಷೇತ್ರದಲ್ಲಿ ಕಳೆದ 10 ವರ್ಷಗಳಲ್ಲಿ ಸಾಕಷ್ಟು ಅಭಿವದ್ಧಿ ಕಾರ್ಯಗಳು ನಡೆದಿವೆ. ಬಸವರಾಜ ಬೊಮ್ಮಾಯಿ ಅವರು ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ಲೋಕಸಭೆ ಚುನಾವಣೆ ಗೆಲ್ಲಲು ಸಂಘಟಿತರಾಗಿ ಕಾರ್ಯ ಮಾಡಬೇಕಿದೆ. ಪ್ರಲ್ಹಾದ ಜೋಶಿ ಅವರು ಕ್ಷೇತ್ರದಾದ್ಯಂತ ಅನೇಕ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ನರೇಂದ್ರ ಮೋದಿ ಪ್ರಧಾನಿ ಆಗಬೇಕೆಂದರೆ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಬೇಕು. ಪ್ರಲ್ಹಾದ ಜೋಶಿ ಅವರು ಅತಿ ಹೆಚ್ಚು ಮತಗಳ ಅಂತರಗಳಿಂದ ಗೆಲ್ಲಬೇಕು. ಪ್ರತಿ ಗ್ರಾಮದಲ್ಲಿ ಮತದಾರರು ಬಿಜೆಪಿಗೆ ಮತ ನೀಡಬೇಕು. ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳು, ಕ್ಷೇತ್ರದಲ್ಲಿ ಪ್ರಲ್ಹಾದ ಜೋಶಿ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ತಿಳಿಸಬೇಕು ಎಂದರು.

ಶಿಗ್ಗಾಂವ ವಿಧಾನಸಭೆ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net