ಜಿಲ್ಲೆ ಅಭಿವೃದ್ಧಿ ನಿರ್ಲಕ್ಷಿಸಿದ್ರೆ ಸೇವೆಗೆ ಅವಕಾಶವಿಲ್ಲ

IMG20250602210048.jpg
Published on

ಬೆಳಗಾವಿ: ಅಭಿವೃದ್ಧಿ ನಿರ್ಲಕ್ಷ್ಯ ಮಾಡುವ ಹಾಗೂ ಕಾನೂನು ಸುವ್ಯವಸ್ಥೆ ಸರಿಯಾಗಿ ನಿಭಾಯಿಸದ ಅಧಿಕಾರಿಗಳಿಗೆ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ನಿರ್ವಹಣೆ ಮಾಡಬೇಕು. ಕರ್ತವ್ಯ ನಿರ್ಲಕ್ಷಿಸಿದರೆ ಸರ್ಕಾರಕ್ಕೆ ಹಾಗೂ ನಮಗೂ ಕೆಟ್ಟ ಹೆಸರು ಬರುತ್ತದೆ. ಕೆಲ ಘಟನೆಗಳಲ್ಲಿ ಕಾನೂನು ಸುವ್ಯವಸ್ಥಿತೆ ಕಾಪಾಡುವಲ್ಲಿ ವಿಫಲರಾದ ನಗರ ಪೊಲೀಸ್ ಆಯುಕ್ತರನ್ನು ವರ್ಗಾವಣೆಗೊಳಿಸಲಾಯಿತು ಎಂದು ತಿಳಿಸಿದರು.

ಕನ್ನಡ ಭಾಷೆ ಬಗ್ಗೆ ನಟ ಕಮಲ ಹಾಸನ್ ಹೇಳಿಕೆ ಸರಿಯಲ್ಲ. ಕನ್ನಡ ಭಾಷೆಗೆ ಸಾವಿರಾರು ವರ್ಷದ ಇತಿಹಾಸವಿದೆ. ನಟ ಕಮಲ್ ಹಾಸನ್ ಮೊದಲು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net