ಸಿಎಂ ಸುಮ್ಮನಿದ್ದರೆ ಕಳ್ಳತನ ಒಪ್ಪಿಕೊಂಡಂತೆ

siddaramaiah-k.s.eshwarappa
Published on

ಶಿವಮೊಗ್ಗ: ಅಕ್ರಮ ಗಣಿಗಾರಿಕೆಯಿಂದ 1.5 ಲಕ್ಷ ಕೋಟಿ ರೂ. ಸರ್ಕಾರಕ್ಕೆ ನಷ್ಟವಾಗಿದೆ ಎಂಬ ಗಭೀರ ಆರೋಪವನ್ನು ಕಾಂಗ್ರೆಸ್ ಪಕ್ಷದ ಸಚಿವರು ಮಾಡಿದ್ದರೂ ಸಿಎಂ ಸಿದ್ದರಾಮಯ್ಯ ಸುಮ್ಮನಿದ್ದರೆ ಕಳ್ಳತನವನ್ನು ಒಪ್ಪಿಕೊಂಡಂತಾಗುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಗಣಿ ಅಕ್ರಮದ ಬಗ್ಗೆ ಧ್ವನಿ ಎತ್ತಿದ್ದು ಅದನ್ನು ಸ್ವಾಗತಿಸುತ್ತೇನೆ. ಶೇ.92ರಷ್ಟು ತನಿಖೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಆದರೂ ಸಿಎಂ ಮೌನ ವಹಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗಣಿಗಾಣಿಕೆಯಿಂದ ಆಗಿರುವ ನಷ್ಟದ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಅವರಿಗೆ ಯೋಗ್ಯತೆಯೇ ಇಲ್ಲ. ಪ್ರತಿಪಕ್ಷದ ನಾಯಕರಾಗಿದ್ದಾಗ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅಕ್ರಮವನ್ನು ಬಯಲಿಗೆ ಎಳೆಯುತ್ತೇವೆಂದು ತೋಳು ತಟ್ಟಿ ಸವಾಲು ಹಾಕಿದ್ದರು. ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆಯನ್ನೂ ಮಾಡಿದ್ದರು. ಅವರದ್ದೇ ಪಕ್ಷದ ಸಚಿವರು ಗಭೀರ ಆರೋಪ ಮಾಡಿದ್ದರೂ ಸುಮ್ಮನಿದ್ದರೆ ಕಳ್ಳತನವನ್ನು ಒಪ್ಪಿಕೊಂಡಂತಾಗುತ್ತದೆ. ಈ ವಿಚಾರದಲ್ಲಿ ಸಿಎಂ ರಾಜ್ಯದ ಜನರ ಕ್ಷಮೆಯನ್ನು ಕೇಳಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net