ಹೈಕಮಾಂಡ್ ಸೂಚಿಸಿದರೆ ಎನ್.ಆರ್. ಕ್ಷೇತ್ರದಿಂದ ಸ್ಪರ್ಧೆ: ಶಾಸಕ ಜಮೀರ್ ಅಹಮ್ಮದ್

jameer 1
Published on

ಮೈಸೂರು: ಹೈಕಮಾಂಡ್ ಸೂಚನೆ ನೀಡಿದರೆ ಮೈಸೂರಿನ ನರಸಿಂಹರಾಜ (ಎನ್.ಆರ್.) ಕ್ಷೇತ್ರದಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಬೆಂಗಳೂರಿನ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ನಾನು ಚಾಮರಾಜಪೇಟೆ ಶಾಸಕ. ಆದರೆ ಹೈಕಮಾಂಡ್ ಎನ್.ಆರ್. ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೇಳಿದರೆ ನಾನೇನೂ ಮಾಡಲು ಆಗುವುದಿಲ್ಲ. ಸ್ಪರ್ಧೆ ಮಾಡಲೇಬೇಕಾಗುತ್ತದೆ ಎಂದು ಹೇಳುವ ಮೂಲಕ ನರಸಿಂಹರಾಜ ಶಾಸಕ ತನ್ವೀರ್ ಸೇಠ್ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.


ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಮುಸ್ಲಿಂ ಮುಖ್ಯಮಂತ್ರಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಮುಸಲ್ಮಾನರನ್ನೇ ಮುಖ್ಯಮಂತ್ರಿ ಮಾಡುತ್ತೇನೆಂದು ಘೋಷಣೆ ಮಾಡಬೇಕು. ಅವರಿಗೆ ಮುಸ್ಲಿಮರ ಮೇಲೆ ಪ್ರೀತಿ ಇದ್ದರೆ ಸಿ.ಎಂ.ಇಬ್ರಾಹಿಂ ಅವರನ್ನೇ ಸಿಎಂ ಅಭ್ಯರ್ಥಿ ಅಂತ ಘೋಷಿಸಲಿ ಎಂದು ಸವಾಲು ಹಾಕಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 18, 20 ಅಥವಾ 23 ಸ್ಥಾನ ಮಾತ್ರ ಗೆಲ್ಲುತ್ತದೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಅವರಿಗೆ 100 ಸ್ಥಾನ ಗೆಲ್ಲಲು ಆಗೋದಿಲ್ಲ. ಮುಸ್ಲಿಂ ಮತ ಸೆಳಯಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net