ಜೀವಜಲ ಅಶುದ್ಧವಾಗಿದ್ದರೆ ಕಾಡಲಿದೆ ಅನಾರೋಗ್ಯ

16KMD-1
ಹುಣ್ಣನದೊಡ್ಡಿ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಕದಲೂರು ಉದಯ್ ಉದ್ಘಾಟಿಸಿದರು.
Published on

ಕೆ.ಎಂ.ದೊಡ್ಡಿ: ಕುಡಿಯುವ ನೀರು ಕಲುಷಿತಗೊಂಡಿದ್ದರೆ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.


ಸಮೀಪದ ಹುಣ್ಣನದೊಡ್ಡಿ ಗ್ರಾಮದಲ್ಲಿ ಬುಧವಾರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿ, ಕುಡಿಯುವ ನೀರು ಶುದ್ಧವಾಗಿದ್ದರೆ ಎಷ್ಟೋ ಕಾಯಿಲೆಗಳನ್ನು ದೂರಮಾಡಬಹುದಾಗಿದೆ ಎಂದರು.


ಈ ಹಿಂದೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ 25ಕ್ಕೂ ಹೆಚ್ಚು ದರರಹಿತ ನೀರಿನ ಘಟಕಗಳನ್ನು ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಸ್ಥಾಪಿಸಲಾಗಿದ್ದು ಟ್ರಸ್ಟ್ ಸಮಾಜಮುಖಿಯಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಸರ್ಕಾರದಿಂದ ಬರುವ ಅನೇಕ ಯೋಜನೆಗಳನ್ನು ಪಡೆದುಕೊಂಡು ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡರೆ ನಿರುದ್ಯೋಗ ಸಮಸ್ಯೆ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ಯುವಜನತೆ ಸ್ವಯಂ ಉದ್ಯೋಗದ ಕಡೆ ಹೆಚ್ಚು ಒತ್ತು ನೀಡಿ ಎಂದು ಕಿವಿ ಮಾತು ಹೇಳಿದರು.


ಕದಲೂರು ಗ್ರಾ.ಪಂ. ಅಧ್ಯಕ್ಷ ಮ್ಮೇಗೌಡ, ಮುಖಂಡರಾದ ಆರ್‌ಸಿಎಸ್ ಶಿವು, ವಸಂತ, ಶಿವಣ್ಣ, ಚಿಕ್ಕರಸಿನಕೆರೆ ಶಿವಲಿಂಗಯ್ಯ, ದೊಡ್ಡಯ್ಯ, ಜೋಗಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net