ಮಾಸ್ಕ್ ಧರಿಸದಿದ್ದರೆ ದಂಡ ವಸೂಲು

18..npk-3
Published on

ನಾಪೋಕ್ಲು: ಆರೋಗ್ಯ ದೃಷ್ಟಿಯಿಂದ ಮಾಸ್ಕ್ ಧರಿಸುವುದು ಅನಿವಾರ್ಯವಾಗಿದ್ದು, ಧರಿಸದಿದ್ದರೆ ದಂಡ ವಸೂಲು ಮಾಡಲಾಗುವುದು ಎಂದು ಇಲ್ಲಿನ ಗ್ರಾಮ ಪಂಚಾಯಿತಿ ಸಿಬ್ಬಂದಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು.

ಮಾಸ್ಕ್ ದಿನದ ಅಂಗವಾಗಿ ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಸಿಬ್ಬಂದಿ, ಆಶಾ ಹಾಗೂ ಆರೋಗ್ಯ ಕಾರ್ಯಕರ್ತೆಯರು, ಪಟ್ಟಣ ವ್ಯಾಪ್ತಿಯಲ್ಲಿ ಅಂಗಡಿಗಳಿಗೆ ತೆರಳಿ ಜಾಗೃತಿ ಮೂಡಿಸಿದರು.

ಕರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಕಡ್ಡಾಯ ಎಂಬುದನ್ನು ಮನವರಿಕೆ ಮಾಡಿಕೊಟ್ಟರು.
ಗ್ರಾಮ ಪಂಚಾಯಿತಿ ಸಿಬ್ಬಂದಿ ಷರ್ಲಿ, ಅಂಗನವಾಡಿ ಕಾರ್ಯಕರ್ತೆ ಅಜಿತಾ, ಆ ಾಕಾರ್ಯಕರ್ತೆಯರಾದ ಕಾವೇರಮ್ಮ, ಪೊನ್ನಮ್ಮ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net