

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಪೌರ ಕಾರ್ವಿುಕರ ಗುತ್ತಿಗೆ ಪದ್ಧತಿ ರದ್ದುಗೊಳಿಸಿ ನೇರನೇಮಕಾತಿ ಮಾಡಿಕೊಳ್ಳಬೇಕು. ಇಲ್ಲವಾದರೆ ಹುಬ್ಬಳ್ಳಿಯಿಂದಲೇ ಹೋರಾಟ ತೀವ್ರಗೊಳಿಸುವುದಾಗಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ)ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಎಚ್ಚರಿಕೆ ನೀಡಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 799 ಗುತ್ತಿಗೆ ಪೌರ ಕಾರ್ವಿುಕರನ್ನು ಮೈಸೂರು ಮಹಾನಗರ ಪಾಲಿಕೆ ಮಾದರಿಯಲ್ಲಿ ನೇಮಕ ಮಾಡಿಕೊಳ್ಳಬೇಕು. ಇದೇ ಬೇಡಿಕೆ ಇಟ್ಟುಕೊಂಡು ಪೌರಕಾರ್ವಿುಕರು ಹೋರಾಟ ಮಾಡುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಆರೋಪಿಸಿದರು.
ಪ್ರಧಾನ ಕಾರ್ಯದರ್ಶಿ ಬಿ.ಆರ್. ಭಾಸ್ಕರ ಪ್ರಸಾದ, ಜಿಲ್ಲಾಧ್ಯಕ್ಷ ಮಕ್ತುಮ್ ಹುಸೇನ್ ಹೊಸಮನಿ, ಸದಸ್ಯ ವಿಜಯ ಗುಂಟ್ರಾಳ, ಇಸ್ಮಾಯಿಲ್ನಾಲಾಬಂದ್, ಅಬ್ದುಲ್ ಜಬ್ಬಾರ ಸುದ್ದಿಗೋಷ್ಠಿಯಲ್ಲಿದ್ದರು.