ನೈತಿಕತೆಯಿದ್ದರೆ ಸಿಎಂ ರಾಜೀನಾಮೆ ನೀಡಲಿ

If there is morality, let the CM resign
ಬಸವನಬಾಗೇವಾಡಿ ಪಟ್ಟಣದ ಮೂಲನಂದೀಶ್ವರ (ಬಸವೇಶ್ವರ) ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಜಗದೀಶ ಶೆಟ್ಟರ ಅವರನ್ನು ತಾಲೂಕು ಬಣಿಜಿಗ ಸಮಾಜದಿಂದ ಸನ್ಮಾನಿಸಲಾಯಿತು. ಮಾಜಿ ಸಚಿವ ಎಸ್​.ಕೆ. ಬೆಳ್ಳುಬ್ಬಿ ಇತರರಿದ್ದರು.
Published on

ಬಸವನಬಾಗೇವಾಡಿ: ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್​ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಒಂದು ಕಡೆ ನ್ಯಾಯಾಲಯ ಹೋರಾಟ ಮಾಡುತ್ತಾರೆ. ಇನ್ನೊಂದು ಕಡೆ ಬೀದಿಯಲ್ಲಿ ಹೋರಾಟ ಮಾಡುವುದು ಯಾವ ನ್ಯಾಯ ಎಂದು ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹೇಳಿದರು.

ಪಟ್ಟಣದ ಮೂಲನಂದೀಶ್ವರ (ಬಸವೇಶ್ವರ) ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆಯಿದ್ದರೆ ತಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ.

ಮುಡಾ ನಿವೇಶನ ಹಂಚಿಕೆ ಹಗರಣದ ಕುರಿತು ಕೆಲವರಿಂದ ದೂರು ಬಂದಿರುವುದರಿಂದ ರಾಜ್ಯಪಾಲರು ಪ್ರಾಸಿಕ್ಯೂಶನ್​ ಕುರಿತು ತನಿಖೆ ನಡೆಸಲು ಅನುಮತಿ ನೀಡಿದ್ದಾರೆ. ತಾವು ಇದರಲ್ಲಿ ಯಾವುದೇ ತಪ್ಪು ಮಾಡದಿದ್ದರೆ ತನಿಖೆಗೆ ಸಹಕರಿಸಿ. ಅದನ್ನು ಬಿಟ್ಟು ಇಲ್ಲ ಸಲ್ಲದ ವಿಷಯ ಮಾತನಾಡುವುದನ್ನು ಬಿಟ್ಟು ತಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಹೇಳಿದರು.

ತಾವು ತಪ್ಪೇ ಮಾಡದಿದ್ದರೆ ತನಿಖೆಗೆ ಸಹಕರಿಸಬೇಕು. ಅದನ್ನು ಬಿಟ್ಟು ಈ ರೀತಿ ಸುಮ್ಮ ಸುಮ್ಮನೆ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಥನ ರೆಡ್ಡಿ ಇವರ ವಿರುದ್ಧ ಪ್ರಾಸಿಕ್ಯೂಷನ್​ ಅನುಮತಿ ನೀಡಿ ಎಂದು ಹೇಳುವ ಬದಲು ತಾವು ಏಕೆ ? ಈ ಹಿಂದೆ ಇದರ ಬಗ್ಗೆ ಮಾತನಾಡಲಿಲ್ಲ, ಒತ್ತಾಯಿಸಲಿಲ್ಲ ಎಂದು ಪ್ರಶ್ನಿಸಿದರು.

ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್​ ಪ ಅಧಿಕಾರಕ್ಕೆ ಬಂದಿದೆ. ಕೋವಿಡ್​ ಕಾಲದಲ್ಲಿ ಅಷ್ಟು ಹಗರಣವಾಗಿದೆ. 960 ಎಕರೆ ಅರ್ಕಾವತಿ ಬಡಾವಣೆ ಡಿನೋಟಿಫೈ ಕೆಂಪಯ್ಯ ಆಯೋಗದ ವರದಿ ಇದ್ದರೂ ಇಲ್ಲಿವರೆಗೆ ಅದರ ಬಗ್ಗೆ ಒಂದೇ ಒಂದು ಮಾತುಕೂಡ ಎತ್ತಿಲ್ಲ. ಈಗ ಈ ಮುಡಾ ಹಗರಣದ ವಿಷಯವನ್ನು ಬೇರೆಡೆ (ವಿಷಯಾಂತರ) ಮಾಡುವ ಉದ್ದೇಶದಿಂದ ಈಗ ಈ ರೀತಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಸ್​.ಕೆ. ಬೆಳ್ಳುಬ್ಬಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net