

ನಿಪ್ಪಾಣಿ: ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಕೌಶಲ, ಜ್ಞಾನ ಪ್ರಮುಖವಾಗಿದೆ ಎಂದು ಮಧ್ಯಪ್ರದೇಶದ ಸಾಗರದ ಡಾ.ಹರೀಶಸಿಂಗ್ ಗೌರ ಕೇಂದ್ರಿಯ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಪ್ರಕಾಶ ಕಾಂಬಳೆ ಹೇಳಿದರು.
ಸ್ಥಳೀಯ ಕೆಎಲ್‌ಇ ಸಂಸ್ಥೆಯ ಜಿ.ಐ.ಬಾಗೇವಾಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಪ್ರೇರಿತ ಅರ್ಥಶಾಸ್ತ್ರ ವಿಭಾಗ ಹಮ್ಮಿಕೊಂಡಿದ್ದ ಭಾರತದಲ್ಲಿ ಉದ್ಯಮಶೀಲತೆಯ ಅಭಿವೃದ್ಧಿ ಮತ್ತು ನೀತಿ ಎಂಬ ಶೀರ್ಷಿಕೆಯಡಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.
ಪ್ರಾಚಾರ್ಯ ಡಾ.ಎಂ.ಎಂ.ಹುರಳಿ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಡಾ.ಅತುಲಕುಮಾರ ಕಾಂಬಳೆ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಬಿ.ಜಿ.ಉಳ್ಳೇಗಡ್ಡಿ ಇತರರಿದ್ದರು. ಡಾ.ವಿನೋದ ಮಗದುಮ ನಿರೂಪಿಸಿದರು. 18-2