

ಲಕ್ಷ್ಮೇಶ್ವರ: ಪಟ್ಟಣದ ಸುಲೇಮಾನಿಯಾ ಶಾದಿಮಹಲ್‌ನಲ್ಲಿ ದೂದನಾನಾ ಮುಹಿಬ್ಬನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ, ಮಾದಕ ವಸ್ತು ಆಂದೋಲನ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಬುಧವಾರ ಜರುಗಿತು.
ಎನ್‌ಪಿಎಂ ಝೈನುದ್ ಅಭಿದ್ ತಂಬಳ್ ಅವರು ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಅವರಿಗೆ ಆಂಬುಲೆನ್ಸ್ ಕೀ ಹಸ್ತಾಂತರಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಗಡ್ಡದೇವರಮಠ ಮಾತನಾಡಿ, ಕಷ್ಟಪಟ್ಟು ದುಡಿದು ಗಳಿಸಿದ ಸಂಪತ್ತಿನಲ್ಲಿ ಕೆಲ ಭಾಗವನ್ನು ಸಮಾಜದ ಅಭಿವೃದ್ಧಿಗೆ ಖರ್ಚು ಮಾಡಿದರೆ ಪುಣ್ಯ ಲಭಿಸುತ್ತದೆ ಎಂದು ತಿಳಿಸಿದರು.
ಅಬ್ದುಲ್ ಖಾದರ್ ಮಾತನಾಡಿ, ಬಡವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಆಂಬುಲೆನ್ಸ್ ಸೇವೆ ಆರಂಭಿಸಲಾಗಿದೆ ಎಂದರು.
ಇಕ್ಬಾಲ್ ಬಾಳಿಲ್ಲ ಮಾತನಾಡಿ, ಯುವಕರು ಸಮಾಜದ ಶಕ್ತಿ. ಸುಂದರ ಸಮಾಜ ನಿರ್ಮಾಣಕ್ಕೆ ಅವರು ಶ್ರಮಿಸಬೇಕು ಎಂದರು
ಇಸ್ಮಾಯಿಲ್ ಆಡೂರ, ಸೈಯದ್ ಜಲಾಲುದ್ದೀನ್ ತಂಬಳ್, ಯು.ಟಿ. ಝುಲ್ವಿಕಾರ್, ದೂದಪೀರಾಂ ದರ್ಗಾ ಸಮಿತಿ ಅಧ್ಯಕ್ಷ ಸುಲೇಮಾನಸಾಬ್ ಕಣಕೆ, ಅಂಜುಮನ್ ಇಸ್ಲಾಂ ಸಮಿತಿ ಅಧ್ಯಕ್ಷ ಎಂ.ಎಂ. ಗದಗ, ದಾದಾಪೀರ್ ಮುಚ್ಛಾಲೆ, ಫಿರ್ದೋಸ್ ಅಡೂರ, ಸಿಕಂದರಬಾಷಾ ಕಣಕೆ, ಶರಣು ಗೋಡಿ, ಎಂ.ಐ.ಮುಳಗುಂದ, ಮುಸ್ತಾಕ್ ಅಹಮ್ಮದ್ ಶಿರಹಟ್ಟಿ, ವಿಜಯ ಕರಡಿ, ಸರೋಜಕ್ಕ ಬನ್ನೂರ, ಶೈಲಾ ಆದಿ, ಮುನೀರ್‌ಅಹಮ್ಮದ ಸಿದ್ದಾಪೂರ ಇತರರಿದ್ದರು.