

ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಮೊದಲ ಪಾಠಶಾಲೆ ಮನೆಯಾಗಿರುವುರಿಂದ ಪಾಲಕರು ಸಂಸ್ಕಾರವನ್ನು ಅಳವಡಿಸಿಕೊಂಡಿದ್ದರೆ ಮಕ್ಕಳು ಸಹಜವಾಗಿ ಅದನ್ನು ಪಾಲಿಸುತ್ತಾರೆ. ವಿದ್ಯಾರ್ಥಿಗಳು ಅಧ್ಯಯನದ ಅವಧಿಯಲ್ಲಿ ಬೇರೆಡೆಗೆ ಆಕರ್ಷಿತರಾಗದೆ ಗುರಿಯೆಡೆಗೆ ಗಮನ ಕೊಟ್ಟರೆ ಭವಿಷ್ಯ ಉತ್ತಮವಾಗುತ್ತದೆ ಎಂದು ಹಿರಿಯ ಯಕ್ಷಗಾನ ಕಲಾವಿದ ಸೀತಾರಾಮ ಕುಮಾರ್ ಕಟೀಲ್ ಹೇಳಿದರು.
ಬಂಟ್ವಾಳ ವಿದ್ಯಾಗಿರಿಯ ಶ್ರೀ ವೆಂಕಟರಮಣ ಸ್ವಾಮೀ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ವಾರ್ಷಿಕೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಶ್ರೀ ವೆಂಕಟರಮಣ ಸ್ವಾಮೀ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕಿ ರೇಖಾ ಕೆ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಸುಪ್ರೀತ್ ಕಡಕೋಳ್, ಎಸ್.ವಿ.ಎಸ್. ಪಿ.ಯು. ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ.ವರದಿ ವಾಚಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಿವಣ್ಣ ಪ್ರಭು ಕೆ.ಅತಿಥಿಗಳನ್ನು ಪರಿಚಯಿಸಿದರು. ಪ್ರಾಧ್ಯಾಪಕರಾದ ಗೀತಾ ಸ್ವಾಗತಿಸಿ, ರೂಪಾ ವಂದಿಸಿದರು. 2022-23ನೇ ಸಾಲಿನ ವಿಶ್ವವಿದ್ಯಾಲಯ ಮಟ್ಟದ ರ‌್ಯಾಂಕ್ ವಿಜೇತರನ್ನು ಸನ್ಮಾನಿಸಲಾಯಿತು. ಶೈಕ್ಷಣಿಕ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವತರಿಸಲಾಯಿತು. ಬಳಿಕ ಎಸ್.ವಿ.ಎಸ್ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀಚಕ್ರ ವಿಜಯ ಯಕ್ಷಗಾನ ಪ್ರದರ್ಶನ ನಡೆಯಿತು. ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.