ಹಡಪದ ಅಪ್ಪಣ್ಣನ ತತ್ವ ಪಾಲಿಸಿದರೆ ಜೀವನ ಹಸನು

ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮ ನಡೆಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಮೇಶ್, ವೈರಮುಡಿ, ಕೃಷ್ಣಪ್ಪ ಹಾಗೂ ಶೇಖರ್ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಸೋಮಶೇಖರ್, ರಮೇಶ್, ರಾಮಲಿಂಗಯ್ಯ, ಪಿ.ಶಶಿಕುಮಾರ್, ಸುರೇಶ್, ಟಿ.ಎಸ್.ಸುರೇಶ್, ಸಿ.ಆರ್.ಮಂಜುನಾಥ್ ಇದ್ದರು.
ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮ ನಡೆಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಮೇಶ್, ವೈರಮುಡಿ, ಕೃಷ್ಣಪ್ಪ ಹಾಗೂ ಶೇಖರ್ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಸೋಮಶೇಖರ್, ರಮೇಶ್, ರಾಮಲಿಂಗಯ್ಯ, ಪಿ.ಶಶಿಕುಮಾರ್, ಸುರೇಶ್, ಟಿ.ಎಸ್.ಸುರೇಶ್, ಸಿ.ಆರ್.ಮಂಜುನಾಥ್ ಇದ್ದರು.
Published on

ಮದ್ದೂರು: ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತಂದ ಮಂಗಳವಾರ ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್ ಹಡಪದ ಅಪ್ಪಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಬಸವಣ್ಣನವರ ನೇತೃತ್ವದಲ್ಲಿ 12ನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯಲ್ಲಿ ಹಡಪದ ಅಪ್ಪಣ್ಣನವರು ಪ್ರಮುಖ ಪಾತ್ರವಹಿಸಿದ್ದರು. ಅವರ ತತ್ವಾದರ್ಶ ಇಂದಿಗೂ ಅನನ್ಯವಾಗಿವೆ. ಅವುಗಳನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬದುಕು ಹಸನಾಗುತ್ತದೆ ಎಂದರು.

ಅಪ್ಪಣ್ಣನವರ ಜೀವನ, ತತ್ವ, ಸಿದ್ಧಾಂತಗಳನ್ನು ಎಲ್ಲರಿಗೂ ತಿಳಿಸಲು ಜಯಂತಿಯನ್ನು ಆಚರಿಸಲಾಗುತ್ತಿದೆ. ಶರಣರ ವಚನಗಳನ್ನು ಆದರ್ಶವಾಗಿಟ್ಟುಕೊಂಡು ಬದುಕು ರೂಪಿಸಿಕೊಳ್ಳಬೇಕು. ಅಪ್ಪಣ್ಣನವರು ಒಬ್ಬ ಸೇವಾ ಯೋಗಿ, ಕಾಯಕನಿರತ ಶರಣರಾಗಿದ್ದಾರೆ. ಅಂತಹ ಮಹಾನ್ ಶರಣರು ನಡೆದು ಬಂದ ದಾರಿಯಲ್ಲಿ ಸಾಗಿದರೆ ಜೀವನ ಸಾರ್ಥಕವಾಗುತ್ತದೆ. ಅವರ ಸ್ಮರಣೆಗೂ ಅರ್ಥ ಸಿಗುತ್ತದೆ ಎಂದರು.

ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಮೇಶ್, ವೈರಮುಡಿ, ಕೃಷ್ಣಪ್ಪ ಹಾಗೂ ಶೇಖರ್ ಅವರನ್ನು ಅಭಿನಂದಿಸಲಾಯಿತು. ಸವಿತಾ ಸಮಾಜದ ಗೌರವಾಧ್ಯಕ್ಷ ರಮೇಶ್, ಅಧ್ಯಕ್ಷ ರಾಮಲಿಂಗಯ್ಯ, ಉಪಾಧ್ಯಕ್ಷ ಪಿ.ಶಶಿಕುಮಾರ್, ಕಾರ್ಯದರ್ಶಿ ಸುರೇಶ್, ಸಂಘಟನಾ ಕಾರ್ಯದರ್ಶಿ ಟಿ.ಎಸ್.ಸುರೇಶ್, ಖಜಾಂಚಿ ಸಿ.ಆರ್.ಮಂಜುನಾಥ್, ಹಿರಿಯ ಸಲಹೆಗಾರ ವೈರಮುಡಿ, ಮುಖಂಡರಾದ ಶೇಖರ್, ವೆಂಕಟೇಶ್, ಶ್ರೀನಿವಾಸ್, ಅಪ್ಪಾಜಿ, ಶಂಕರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net