ದುಶ್ಚಟದಿಂದ ದೂರವಿದ್ದರೆ ಬದುಕು ಹಸನು

1 TKE 1,1(1)
Published on

ತರೀಕೆರೆ: ದುಶ್ಚಟದಿಂದ ದೂರವಿದ್ದರೆ ಮಾತ್ರ ಬದುಕು ಹಸನಾಗಿರಲು ಸಾಧ್ಯ ಎಂದು ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಲ್.ಪರಮೇಶ್ ಹೇಳಿದರು.

ಲಕ್ಕವಳ್ಳಿ ಗಣಪತಿ ಪೆಂಡಾಲ್‌ನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನ ಜಾಗೃತಿ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ 1890ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸರ್ಕಾರಕ್ಕೆ ಸಮಾನಾಂತರವಾಗಿ ಕೆಲಸ ಮಾಡುತ್ತಿದೆ. ಮಹಿಳೆಯರನ್ನು ಸ್ವಾವಲಂಬಿಯಾಗಿಸಲು ಸಕಾಲದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸಿ ಉತ್ತೇಜಿಸುತ್ತಿದೆ. ಈವರೆಗೆ ಆಯೋಜಿಸಿರುವ ಮದ್ಯವರ್ಜನ ಶಿಬಿರದಲ್ಲಿ ಸಹಸ್ರಾರು ಮಂದಿ ವ್ಯಸನಮುಕ್ತರಾಗಿ ಉತ್ತಮ ಬದುಕಿನತ್ತ ಹೆಜ್ಜೆ ಇಟ್ಟಿದ್ದಾರೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಮಾತನಾಡಿ, ಕುಡಿತದಿಂದ ಜೀವನ ಹಾಳು ಮಾಡಿಕೊಳ್ಳುವುದು ಬೇಡ. ಕುಡಿತದಿಂದ ಆರೋಗ್ಯ ಹಾಳಾಗುವ ಜತೆಗೆ ಆರ್ಥಿಕ ಮುಗ್ಗಟ್ಟು ಎದುರಾಗಿ ಜೀವನವೇ ಬೀದಿಗೆ ಬೀಳುವ ಸಾಧ್ಯತೆ ಇದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಮಾಜಿಕ ಕಳಕಳಿ ಹೊಂದಿದ್ದು, ಪರಿವರ್ತನೆ, ಸಂಸ್ಕಾರಯುತ ಬದುಕು ನಡೆಸಲು ನೆರವಾಗಲಿದೆ ಎಂದರು.

ಗ್ರಾಪಂ ಅಧ್ಯಕ್ಷ ಅಬ್ದುಲ್ ರೆಹಮಾನ್, ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯರಾದ ಟಿ.ಆರ್.ಶ್ರೀಧರ್, ಅಸ್ಲಾಂಖಾನ್, ರಮೇಶ್, ಮೂಡಲ ಗಿರಿಯಪ್ಪ, ತಾಪಂ ಮಾಜಿ ಅಧ್ಯಕ್ಷೆ ಪದ್ಮಾವತಿ, ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಕೆ.ಕುಸುಮಧರ್, ಶಿಬಿರಾಧಿಕಾರಿ ವಿದ್ಯಾಧರ್, ಮೇಲ್ವಿಚಾರಕ ಸುರೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net