

ಹಿರೇಕೆರೂರ: ಕೆಲವು ಅಗತ್ಯ ಮುಂಜಾಗ್ರತೆ ವಹಿಸಿದರೆ ಡೆಂೆ ಜ್ವರದಿಂದ ದೂರವಿರಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಜೆಡ್.ಆರ್. ಮಕಾಂದಾರ ಹೇಳಿದರು.
ಪಟ್ಟಣದಲ್ಲಿ ತಾಲೂಕು ಆರೋಗ್ಯಾಧಿಕಾರಿ ಕಾರ್ಯಾಲಯ ಹಾಗೂ ಮದಕರಿ ಪ್ಯಾರಾ ಮೆಡಿಕಲ್ ಕಾಲೇಜಿನ ವತಿಯಿಂದ ತಾಲೂಕು ಮಟ್ಟದ ರಾಷ್ಟ್ರೀಯ ಡೆಂೆ ಜಾಗೃತಿ ದಿನಾಚರಣೆ ನಿಮಿತ್ತ ಗುರುವಾರ ಏರ್ಪಡಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಯಾವುದೇ ಜ್ವರ ಬಂದರೆ ತಕ್ಷಣ ಹತ್ತಿರದ ವೈದ್ಯರ ಬಳಿ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಯಾವುದನ್ನೂ ನಿರ್ಲಕ್ಷಿಸಬಾರದು. ಡೆಂೆ ಲಕ್ಷಣಗಳು ಕಂಡುಬಂದಲ್ಲಿ ಮೊದಲ ಹಂತದಲ್ಲಿದ್ದರೆ ಅದನ್ನು ತಕ್ಷಣವೇ ತಡೆಗಟ್ಟಬಹುದಾಗಿದೆ. ನಿರ್ಲಕ್ಷಿಸಿದರೆ ಅಪಾಯ ತಪ್ಪಿದ್ದಲ್ಲ ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಮಪ್ಪ ಸದರಪ್ಪನವರ ಅವರು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಆರೋಗ್ಯ ಕುರಿತು ಶಿಕ್ಷಣ ತಿಳಿಸಿದರು.
ವೈದ್ಯಾಧಿಕಾರಿ ಡಾ. ಹೊನ್ನಪ್ಪ ಜಿ.ಎಂ., ವಾಣಿಶ್ರೀ ಕುಲಕರ್ಣಿ, ಕಾಲೇಜ್ ಆಡಳಿತ ಅಧಿಕಾರಿ ಅಂಜುಂ ಪ್ಯಾಟಿ ಹಾಗೂ ಕಾಲೇಜ್ ವಿದ್ಯಾರ್ಥಿಗಳು ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.