ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ದುರ್ದೈವ: ಸಚಿವ ರಹೀಂ ಖಾನ್

congress office
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ರಹೀಂ ಖಾನ್ ಅವರನ್ನು ಸನ್ಮಾನಿಸಲಾಯಿತು. ಆರ್.ಪ್ರಸನ್ನಕುಮಾರ್, ಬಲ್ಕಿಷ್ ಬಾನು, ಎಸ್.ರವಿಕುಮಾರ್, ಎಚ್.ಸಿ.ಯೋಗೇಶ್, ಶಿವಣ್ಣ, ಶಿವಕುಮಾರ್ ಇದ್ದರು.
Published on

ಶಿವಮೊಗ್ಗ: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಕಾರ್ಯಕರ್ತರನ್ನು ಕಡೆಗಣಿಸುವ ಕೆಲಸ ಆಗುತ್ತಿರುವುದು ದುರ್ದೈವ. ಇನ್ಮುಂದೆ ನಿಷ್ಠಾವಂತ ಕಾರ್ಯಕರ್ತರಿಗೇ ಅಧಿಕಾರ ಸಿಗುವಂತೆ ಮಾಡಬೇಕಿದೆ ಎಂದು ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಶಾಸಕರು ಮತ್ತು ಸಚಿವರಿಗೆ ಬ್ಯಾಗ್ ತೆಗೆದುಕೊಂಡು ಹೋಗುತ್ತಾರೋ ಅವರಿಗೆ ಟಿಕೆಟ್ ನೀಡುವ ಸಂಪ್ರದಾಯ ಬೆಳೆದಿದೆ. ಇದು ಕಾಂಗ್ರೆಸ್‌ನ ದುರ್ದೈವದ ಸಂಗತಿ. ಆ ರೀತಿ ಮಾಡುತ್ತಿರುವುದರಿಂದ ರಾಜಕೀಯದಲ್ಲಿ ಹೊಸಬರು ಹುಟ್ಟಿಕೊಳ್ಳುತ್ತಿದ್ದಾರೆ. ಎಲೆಮರೆ ಕಾಯಿಯಂತೆ ಇದ್ದು ಪಕ್ಷಕ್ಕಾಗಿ ನಿಷ್ಠರಾಗಿರುವವರಿಗೆ ಅನ್ಯಾಯ ಮಾಡಿದಂತೆ ಆಗುತ್ತಿದೆ. ಆ ಕೆಲಸಗಳು ಮುಂದೆ ಆಗಬಾರದು ಎಂದರು.

ಶಾಸಕರು, ಸಚಿವರು, ಮುಖ್ಯಮಂತ್ರಿ ಆಪ್ತನಾಗಿದ್ದರೂ ಪರವಾಗಿಲ್ಲ. ಅಂತಹವರ ಹೆಸರು ಕೈಬಿಟ್ಟು ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿರುವ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಆಗಬೇಕಿದೆ. ಅಂತಹ ಕಾರ್ಯಕರ್ತರ ಪಟ್ಟಿಯನ್ನು ಕೆಪಿಸಿಸಿಗೆ ಕಳುಹಿಸಿಕೊಡುವ ಜವಾಬ್ದಾರಿ ಆಯಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮೇಲಿದೆ ಎಂದರು.

ಡಿಸೆಂಬರ್‌ನಲ್ಲಿ ಸಿಎಂಸಿ, ಡಿಎಂಸಿ, ನಗರಸಭೆ, ಪಾಲಿಕೆಗಳಿಗೆ ಅನುದಾನ ಬಿಡುಗಡೆ ಮಾಡಲಿದ್ದು, ಸರ್ಕಾರ ಬಂದ ಬಳಿಕ ಶಿವಮೊಗ್ಗ ಜಿಲ್ಲೆಗೆ 1,200ರಿಂದ 2,000 ಕೋಟಿ ರೂ. ಅನುದಾನ ಬಂದಿದೆ. ಗ್ಯಾರಂಟಿಗಳ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net