ಐಐಟಿಯ ಸೆಂಟ್ರಲ್ ಲರ್ನಿಂಗ್ ಥಿಯೇಟರ್ ಉದ್ಘಾಟನೆ ಇಂದು

29 Dwd 5
Published on

ಧಾರವಾಡ: ಧಾರವಾಡ ಐಐಟಿಯಲ್ಲಿನ ಜ್ಞಾನ ಸಂಪನ್ಮೂಲ ಮತ್ತು ದತ್ತಾಂಶ ಕೇಂದ್ರ ಹಾಗೂ ಸೆಂಟ್ರಲ್ ಲರ್ನಿಂಗ್ ಥಿಯೇಟರ್ ಮತ್ತು ಶಾಶ್ವತ ಕಟ್ಟಡದಲ್ಲಿನ 2 ಹೊಸ ಪ್ರವೇಶ ದ್ವಾರಗಳ ಉದ್ಘಾಟನಾ ಸಮಾರಂಭ ಮಾ. 1ರಂದು ಜರುಗಲಿದೆ. ಉಪ ರಾಷ್ಟçಪತಿ ಜಗದೀಪ್ ಧನ್‌ಕರ್ ಅವರು ಮಧ್ಯಾಹ್ನ 2 ಗಂಟೆಗೆ ಉದ್ಘಾಟಿಸುವರು. ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಬೇಲೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾವಕ್ಕ ಬಿ. ಶಿರೂರು, ಐಐಟಿ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ಆರ್. ದೇಸಾಯಿ ಉಪಸ್ಥಿತರಿರುವು ಎಂದು ಐಐಟಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net