ಚೇತನ್ ಕ್ಷಮೆ ಯಾಚನೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಆಗ್ರಹ

ikala
Published on

ಮಂಗಳೂರು : ದೈವಾರಾಧನೆ ಹಿಂದೂ ಸಂಪ್ರದಾಯವಲ್ಲ ಎಂದು ಹೇಳಿಕೆ ನೀಡುವ ಮೂಲಕ ನಟ ಚೇತನ್ ಲಕ್ಷಾಂತರ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಸಿನಿಮಾದಲ್ಲಿ ತೋರಿಸಲಾದ ದೈವಾರಾಧನೆಯ ಬಗ್ಗೆ ಚೇತನ್ ಕೇವಲವಾಗಿ ಮಾತನಾಡಿರುವುದು ಖಂಡನೀಯ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.
ದೈವಾರಾಧನೆಗೆ ತುಳುನಾಡಿನಲ್ಲಿ ವಿಶೇಷ ಮನ್ನಣೆ ಇದೆ. ನಮಗೆ ನಂಬಿಕೆ ಇದೆ. ಆದರೆ ಚೇತನ್ ತುಳುನಾಡಿನ ಸಂಸ್ಕೃತಿ, ಆಚಾರ ವಿಚಾರಗಳನ್ನು ತಿಳಿಯದೆ ಮಾತನಾಡಿರುವುದು ತಪ್ಪು. ಚೇತನ್ ಕೂಡಲೇ ಕ್ಷಮೆಯಾಚಿಸ ಬೇಕು. ರಿಷಬ್ ಶೆಟ್ಟಿ ಅವರೊಂದಿಗೆ ಸಮಸ್ತ ತುಳುವರಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net