ಸುಳ್ಳು ಆರೋಪ ಮಾಡುವುದನ್ನು ಬಿಡಲಿ

ILK 11-1
Published on

ಇಳಕಲ್ಲ: ಚುನಾವಣೆ ಸಮಯದಲ್ಲಿ ವಿನಾಕಾರಣ ಸುಳ್ಳು ಆರೋಪಗಳನ್ನು ಮಾಡುವ ಚಾಳಿಯನ್ನು ಮೊದಲು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಬಿಡಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ತಿಳಿಸಿದರು.

ಬಾಗಲಕೋಟೆ ಡಿಸಿಸಿ ಬ್ಯಾಂಕ್ ಚುನಾವಣೆಯ ಸಲುವಾಗಿ ತಾಲೂಕಿನ ವಿವಿಧ ಪಿಕೆಪಿಎಸ್‌ಗಳಲ್ಲಿ ನಡಾವಳಿಗಳನ್ನು ಮಾಡುವ ಕಾರ್ಯ ನಡೆದಿದೆ. ಅಲ್ಲಿಗೆ ತಹಸೀಲ್ದಾರರು ಹೋಗಿ ದಬ್ಬಾಳಿಕೆಯನ್ನು ಮಾಡುತ್ತಿದ್ದಾರೆ ಎಂಬಂತಹ ಆರೋಪವನ್ನು ಮಾಜಿ ಶಾಸಕರು ಮಾಡುತ್ತಿದ್ದು. ಅಧಿಕಾರಿಗಳ ನೈತಿಕ ಸ್ಥೈರ್ಯ ಕುಂದಿಸುವ ಕಾರ್ಯವನ್ನು ಅವರು ಮಾಡುತ್ತಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು.

ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ, ನಗರ ಘಟಕ ಅಧ್ಯಕ್ಷ ಅರವಿಂದ ಮಂಗಳೂರ, ಬಿಜೆಪಿ ಹಿರಿಯ ಮುಖಂಡರಾದ ಶ್ಯಾಮಸುಂದರ ಕರವಾ, ಸಿ.ಎಸ್.ಪಾಟೀಲ, ಸೂಗುರೇಶ ನಾಗಲೋಟಿ ಮತ್ತಿತರರು ಉಪಸ್ಥಿತರಿದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net