ಇಳಕಲ್ಲ ನಗರದಲ್ಲಿ ಭಾರಿ ಅಗ್ನಿ ಅವಘಡ

BKT 72
Published on

ಇಳಕಲ್ಲ: ಇಳಕಲ್ಲ ನಗರದಲ್ಲಿ ಭಾನುವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ನಗರದ ಬಸವೇಶ್ವರ ವೃತ್ತದ ಬಳಿ ಇರುವ ಶೇಖರ ಸಜ್ಜನ ಎಂಬುವವರಿಗೆ ಸೇರಿದ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಹಾರ್ಡವೇರ್ ಅಂಗಡಿ ಹೊತ್ತಿ ಉರಿದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಟ್ಟರು. ತಡರಾತ್ರಿವರೆಗೂ ಬೆಂಕಿ ಹತೋಟಿಗೆ ಬಂದಿರಲಿಲ್ಲ. ಕಾಂಪ್ಲೆಕ್ಸ್‌ನಲ್ಲಿರುವ ಮೋರ್ ಸೂಪರ್ ಮಾರ್ಕೆಟ್, ಇಳಕಲ್ಲ ಸೀರೆ ಅಂಗಡಿ, ಲಾಡ್ಜ್, ಬಟ್ಟೆ ಅಂಗಡಿ, ಕೇಕ್, ಐಸ್‌ಕ್ರೀಮ್ ಅಂಗಡಿ ಸೇರಿ ವಿವಿಧ ಅಂಗಡಿಗಳು ಇವೆ. ಭಾರಿ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಬೆಂಕಿ ಉರಿಯುವ ಪರಿ ನೋಡಿ ಸಾರ್ವಜನಿಕರು ಗಾಬರಿಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net