

ರಾಣೆಬೆನ್ನೂರ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು ಆತನಿಂದ 10 ಸಾವಿರ ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡ ಘಟನೆ ನಗರದ ದೌಲತ ಬಜಾರನಲ್ಲಿ ಶುಕ್ರವಾರ ನಡೆದಿದೆ.
ಮಾರುತಿ ನಗರದ ಹನುಮಂತಪ್ಪ ಸೋಮಪ್ಪ ಉಜನಿ ಎಂಬುವರು ದೌಲತ ಬಜಾರ್‌ನ ಚೌಡೇಶ್ವರಿ ಹೋಟೆಲ್ ಹಿಂಭಾಗದ ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 10 ಸಾವಿರ ರೂ. ಮೌಲ್ಯದ ವಿವಿಧ ಕಂಪನಿಯ 280 ಮದ್ಯದ ಪ್ಯಾಕೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.