ಅಕ್ರಮ ಮದ್ಯ ಸಾಗಣೆ, ಚಾಲಕನ ಬಂಧನ

Arrest Kaidhi
Published on

ಬೆಳಗಾವಿ: ಜಿಲ್ಲೆಯಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಣೆ ಮಾಡುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿರುವ ಜಿಲ್ಲಾ ಪೊಲೀಸರು, ಚಾಲಕನನ್ನು ಬಂಧಿಸಿ 6.22 ಲಕ್ಷ ರೂ. ಮೌಲ್ಯದ ಮದ್ಯವನ್ನು ಶುಕ್ರವಾರ ಜಪ್ತಿ ಮಾಡಿದ್ದಾರೆ.

ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಜನತಾ ಪ್ಲಾಟ್‌ನ ಶಕೀಲ ಕಾಸೀಂಸಾಬ ಶೇಖ್ (34) ಬಂಧಿತ ವ್ಯಕ್ತಿ. ನೆರೆಯ ಗೋವಾ ರಾಜ್ಯದಿಂದ ನಿಪ್ಪಾಣಿ ಕಡೆಗೆ ಅಕ್ರಮವಾಗಿ ಐಸರ್ ಗೂಡ್ಸ್ ವಾಹನದಲ್ಲಿ ಮದ್ಯ ಸಾಗಿಸುತ್ತಿದ್ದ ವೇಳೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಪೊಲೀಸ್ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಮಣಗುತ್ತಿ ಕ್ರಾಸ್ ಬಳಿ ಸಿಕ್ಕಿಬಿದ್ದಿದ್ದಾನೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net