

ಉಡುಪಿ: ಮಣಿಪಾಲ ಠಾಣಾ ವ್ಯಾಪ್ತಿಯ ಅನಂತನಗರ ಎಂಬಲ್ಲಿರುವ ಹಿಂದುಳಿದ ವರ್ಗದವರ ಮೆಟ್ರಿಕ್ ನಂತರದ ಹಾಸ್ಟೆಲ್ಗೆ ಅಕ್ರಮ ಪ್ರವೇಶ ಮಾಡಿ ಕೊಠಡಿಯಲ್ಲಿ ಕಿಟಕಿಯಿಂದ ಕೈಹಾಕಿ ಕಿಟಕಿಯ ಬಳಿ ಮಂಚದಲ್ಲಿ ಮಲಗಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಳ್ಳಿ ಗ್ರಾಮದ ನವೀನ್ ನಾಯ್ಕ್ (22) ಬಂಧಿತ. ಈತನನ್ನು ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಬಂಧಿಸಲಾಗಿದೆ. ಈತ 2023 ರಲ್ಲಿ ಉಡುಪಿ ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಭಾಗಿಯಾಗಿದ್ದು, ಈತನ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.