

ವಿಜಯಪುರ : ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ಸಾಗಿಸುತ್ತಿದ್ದವರ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿ 3 ಲೀಟರ್ ಕಳ್ಳಬಟ್ಟಿ ಸಾರಾಯಿ, ಸಾಗಾಣಿಕೆಗೆ ಬಳಸಿದ ವಾಹನ ಜಪ್ತಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಅಪರ ಆಯುಕ್ತರು, ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ), ಅಬಕಾರಿ ಉಪ ಆಯುಕ್ತರು ಹಾಗೂ ಅಬಕಾರಿ ಉಪ ಅಧೀರ ಉಪ ವಿಭಾಗದ ಮಾರ್ಗದರ್ಶನದಲ್ಲಿ ಶನಿವಾರ ಸಂಜೆ ದಾಳಿ ನಡೆದಿದೆ.
ಬಸವನಬಾಗೇವಾಡಿ ವಲಯ ವ್ಯಾಪ್ತಿಯ ಕೋಲಾರ ತಾಲೂಕಿನ ಮಲಘಾಣ ಗ್ರಾಮದಿಂದ ಕೋಲಾರ ರಾಷ್ಟ್ರೀಯ ಹೆದ್ದಾರಿ ಕಡೆಗೆ ಸುರೇಶ ಗರಸಂಗಿ ಎಂಬುವನು ತನ್ನ ದ್ವಿಚಕ್ರ ವಾಹನದ ಮೇಲೆ ಅಕ್ರಮವಾಗಿ 3 ಲೀಟರ್ ಕಳ್ಳಬಟ್ಟಿ ಸಾರಾಯಿ ಸಾಗಾಣಿಕೆ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಕಳ್ಳಬಟ್ಟಿ ಸಾರಾಯಿ, ಸಾಗಾಣಿಕೆಗೆ ಬಳಸಿದ ವಾಹನ ಮತ್ತು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ನಿರೀಕ ಮಂಜುನಾಥ ಶಿರಹಟ್ಟಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಗೃಹರಕ ದಳದ ಸಾಹೇಬಗೌಡ ಪಾಟೀಲ, ಸಿಬ್ಬಂದಿ ಅಜೀಂ ಮನಗೂಳಿ ಇದ್ದರು.