29 ಸಾವಿರ ರೂ. ಮೌಲ್ಯದ ಅಕ್ರಮ ಮದ್ಯ ವಶ

Crime Logo
Published on

ರಾಣೆಬೆನ್ನೂರ: ರಸ್ತೆ ಬದಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ ಅಬಕಾರಿ ಅಧಿಕಾರಿಗಳು 29 ಸಾವಿರ ರೂ. ಮೌಲ್ಯದ 8500 ಲೀಟರ್​ ಮದ್ಯ ವಶಪಡಿಸಿಕೊಂಡ ಘಟನೆ ನಗರದ ಹುಣಸಿಕಟ್ಟೆ ರಸ್ತೆಯಲ್ಲಿ ಭಾನುವಾರ ನಡೆದಿದೆ.

ತಾಲೂಕಿನ ರಾಹುತನಕಟ್ಟಿ ಗ್ರಾಮದ ಚಂದ್ರಪ್ಪ ಕನ್ನಪ್ಪ ಹೀಲದಹಳ್ಳಿ ಬಂಧಿತ ಆರೋಪಿ.

ಈತ ರಸ್ತೆ ಬದಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net