ಗುರುವಾಯನಕೆರೆಯಲ್ಲಿ ಗೋವು ಅಕ್ರಮ ಸಾಗಾಟ

Bel_Cows
Published on

ಬೆಳ್ತಂಗಡಿ: ಚಿಕ್ಕಮಗಳೂರಿನ ಕೊಟ್ಟಿಗೆಹಾರದಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವನ್ನು ಗುರುವಾಯನಕೆರೆ ಹಾಗೂ ವಿಟ್ಲ ತಾಲೂಕಿನ ಹಿಂದು ಸಂಘಟನೆಯ ಕಾರ್ಯಕರ್ತರು ಮದ್ದಡ್ಕದಲ್ಲಿ ವಶಪಡಿಸಿಕೊಂಡು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಗೋವುಗಳ ರಕ್ಷಣೆ ಮಾಡಿದ್ದಾರೆ.

ವಶಕ್ಕೆ ಪಡೆದಿರುವ ಹೋರಿ ಹಾಗೂ ಗೋವು ಸಾಲೆತ್ತೂರಿನ ಅನ್ಯಕೋಮಿನ ವ್ಯಕ್ತಿಯೊಬ್ಬರಿಗೆ ಸೇರಿರುವುದೆಂದು ತಿಳಿದುಬಂದಿದೆ. ಕರ್ನಾಟಕದ ಬೇರೆ ಬೇರೆ ಪ್ರದೇಶದಿಂದ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವ ಒಂದು ಮಾಫಿಯಾ ಸಾಲೆತ್ತೂರಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹಿಂದು ಕಾರ್ಯಕರ್ತರು ತಿಳಿಸಿದ್ದಾರೆ. ಮುಖ್ಯವಾಗಿ ಕೇರಳದ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುವುದು ನಿತ್ಯ ನಿರಂತರವಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಘಟನಾ ಸ್ಥಳದಲ್ಲಿ ಸೇರಿರುವ ಹಿಂದು ಸಂಘಟನೆ ಕಾರ್ಯಕರ್ತರು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net