

ಕೊಳ್ಳೇಗಾಲ: ತಾಲೂಕಿನ ಹರಳೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3022 ಕೆ ಜಿ ತೂಕದ ಪಡಿತರವನ್ನು ಕೊಳ್ಳೇಗಾಲ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸುಪ್ರೀತ್ ಹಾಗೂ ಆಹಾರ ನಿರೀಕ್ಷಕ ಪ್ರಸಾದ್ ಜಂಟಿಯಾಗಿ ದಾಳಿ ನಡೆಸಿದ್ದಾರೆ. ಪೊಲೀಸರನ್ನು ಕಂಡ ಗೂಡ್ಸ್ ವಾಹನ ಚಾಲಕ ಸ್ಥಳದಲ್ಲಿಯೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ.
ಈ ವೇಳೆ ವಾಹನ ಪರಶೀಸಿದಾಗ 60 ಮೂಟ್ಟೆಯಲ್ಲಿ 3022 ಕೆಜಿ ತೂಕದ ಪಡಿತರ ಅಕ್ಕಿ ದೊರೆತಿದೆ. ಸದ್ಯ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಾಳಿ ಸಂದರ್ಭ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ಮಧು, ಕಾನ್‌ಸ್ಟೇಬಲ್ ದುಂಡು ಪೂಜಾರಿ, ಮನೋಹರ್ ಇತರರಿದ್ದರು.