ಅಕ್ರಮ ಮರಳುಗಾರಿಕೆ 11 ಬೋಟ್ ವಶಕ್ಕೆ

IMG-20211028-WA0045
Published on


ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ೈಸಲ್‌ನಗರ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆಗೆ ಬಳಸಲಾಗುತ್ತಿದ್ದ 11 ಬೋಟುಗಳನ್ನು ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕರಾವಳಿ ನಿಯಂತ್ರಣ ವಲಯ (ಸಿಆರ್‌ಝೆಡ್)ದಲ್ಲಿ  ಮರಳುಗಾರಿಕೆ ಮತ್ತು ಸಾಗಾಟಕ್ಕೆ ಜಿಲ್ಲಾಡಳಿತ ಇನ್ನೂ ಪರವಾನಗಿ ನೀಡಿಲ್ಲ. ಆದರೂ ಕೆಲವು ದಂಧೆಕೋರರು ಅಕ್ರಮವಾಗಿ ಮರಳುಗಾರಿಕೆ, ಸಾಗಾಟ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತ, ಪೊಲೀಸರಿಗೆ ದೂರು ಬರುತ್ತಿರುವ ಹಿನ್ನಲೆಯಲ್ಲಿ  ನಗರ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬುಧವಾರ ನಗರ ಕಾನೂನು ಸುವ್ಯವಸ್ಥಾ ವಿಭಾಗದ ಉಪಆಯುಕ್ತ ಹರಿರಾಂ ಶಂಕರ್ ಮತ್ತು ಕಂಕನಾಡಿ ನಗರ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ನದಿ ತೀರದಲ್ಲಿ ಮರಳುಗಾರಿಕೆಗೆ ಬಳಕೆ ಮಾಡುತ್ತಿದ್ದ 11 ಬೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸೊತ್ತುಗಳನ್ನು ಮುಂದಿನ ಕ್ರಮಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net