ಅಕ್ರಮ ಮರಳುಗಾರಿಕೆ, ಬಾಕ್ಸೈಟ್ ಅಡ್ಡೆಗೆ ದಾಳಿ

New Project (13)
Published on

ವಿಟ್ಲ: ಅಕ್ರಮ ಮರಳುಗಾರಿಕೆ ಹಾಗೂ ಬಾಕ್ಸೆ ಟ್ ಅಗೆಯುವ ಸ್ಥಳಕ್ಕೆ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಕುಡ್ತಮುಗೇರು ಹಾಗೂ ಗಡಿ ಪ್ರದೇಶ ಕನ್ಯಾನ ಪಾದೆಕಲ್ಲು ಎಂಬಲ್ಲಿಗೆ ದಾಳಿ ನಡೆಸಿ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಸ್ಥಳೀಯ ಪಿಡಿಒಗೆ ಪ್ರಕರಣವನ್ನು ಹಸ್ತಾಂತರಿಸಲಾಗಿದೆ.

ಕುಡ್ತಮುಗೇರಿನಲ್ಲಿ 30ಕ್ಕೂ ಅಧಿಕ ಪಿಕಪ್ ಲೋಡ್ ಮರಳು ರಾಶಿ ಸ್ಥಳದಲ್ಲಿ ಸಂಗ್ರಹಿಸಲಾಗಿತ್ತು. ಮರಳು ತೆಗೆಯಲು ಉಪಯೋಗಿಸುವ ಲಕ್ಷಾಂತರ ರೂ. ಮೌಲ್ಯದ ಪರಿಕರಗಳು ಪತ್ತೆಯಾಗಿದ್ದು, ಪ್ರಕರಣದ ಬಗ್ಗೆ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕೊಳ್ನಾಡು ಪಿಡಿಒಗೆ ತಹಸೀಲ್ದಾರ್ ಸೂಚಿಸಿದ್ದಾರೆ.

ಕನ್ಯಾನ ಪಾದೆಕಲ್ಲು ಎಂಬಲ್ಲಿ ಬಾಕ್ಸೆ ಟ್ ಘಟಕಕ್ಕೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ಕಂದಾಯ ಇಲಾಖೆಗೆ ನೀಡುವಂತೆ ತಹಸೀಲ್ದಾರ್ ಸೂಚಿಸಿದ್ದು, ಪ್ರಕರಣವನ್ನು ಗಣಿ ಇಲಾಖೆಗೆ ಹಸ್ತಾಂತರಿಸಲಾಗಿದೆ. ವಿಟ್ಲ ಕಂದಾಯ ಅಧಿಕಾರಿ ರವಿ ಎಂ.ಎನ್., ಗ್ರಾಮ ಆಡಳಿತಾಧಿಕಾರಿ ಕರಿಬಸಪ್ಪ ನಾಯಕ್, ಗ್ರಾಮ ಸಹಾಯಕಾದ ಗಿರೀಶ್ ಶೆಟ್ಟಿ, ರುಕ್ಮಯ್ಯ ಮೂಲ್ಯ, ಲಿಂಗಪ್ಪ ಗೌಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net