ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2 ಮೆಟ್ರಿಕ್ ಟನ್ ಮರಳು ವಶ

Crime Logo
Published on

ರಾಣೆಬೆನ್ನೂರ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಾಟಾ ಇಂಟ್ರಾ ಗೂಡ್ಸ್ ವಾಹನದ ಮೇಲೆ ದಾಳಿ ನಡೆಸಿದ ಪೊಲೀಸರು 1800 ರೂ. ಮೌಲ್ಯದ 2 ಮೆಟ್ರಿಕ್ ಟನ್ ಮರಳನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಹರಿನಗಿರಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕುದರಿಹಾಳ ಗ್ರಾಮದ ಪ್ರದೀಪ ನಾಗಪ್ಪ ಮೇಡ್ಲೇರಿ (22) ಎಂಬಾತ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ವಾಹನ ಹಾಗೂ ಮರಳನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net