ಅಕ್ರಮ ಮರಳು ಸಾಗಾಟ ಲಾರಿ ವಶ

sand
Published on

ಬೆಳ್ತಂಗಡಿ: ಕುದ್ಯಾಡಿ ಗ್ರಾಮದ ಬರಾಯ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವೇಣೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೇಣೂರು ಠಾಣಾ ಪಿಎಸ್‌ಐ ಶ್ರೀಶೈಲ್ ಹಾಗೂ ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net