ಟಾಟಾ ಇಂಟ್ರಾ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

DSCN3012
Published on

ರಾಣೆಬೆನ್ನೂರ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಾಟಾ ಇಂಟ್ರಾ ವಾಹನದ ಮೇಲೆ ದಾಳಿ ನಡೆಸಿದ ಪೊಲೀಸರು 2 ಕ್ಯೂಬಿಕ್ ಮೀಟರ್ ಮರಳನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಚಿಕ್ಕಕುರುವತ್ತಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
ತಾಲೂಕಿನ ಕುದರಿಹಾಳ ಗ್ರಾಮದ ನವೀನ ಬಸಪ್ಪ ನೀಲಪ್ಪನವರ ಹಾಗೂ ಆಕಾಶ ವೀರಬಸಪ್ಪ ತಾವರಗುಂದಿ ಎಂಬುವರು ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದರು.
ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 1800 ರೂ. ಮೌಲ್ಯದ 2 ಕ್ಯೂಬಿಕ್ ಮೀಟರ್ ಮರಳು ಹಾಗೂ ವಾಹನ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net